ನವದೆಹಲಿ: 16ನೇ ಲೋಕಸಭಾದ ಕಾರ್ಯಕ್ಕೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಸಂತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ. ಬಜೆಟ್ ಅಧಿವೇಶನದ ಸಮಾಪನದ ವೇಳೆ ಮಾತನಾಡಿದ ಅವರು, ಈ ಲೋಕಸಭಾದ ಒಟ್ಟು ಅವಧಿಯಲ್ಲಿ 219 ಮಸೂದೆಗಳ ಪೈಕಿ 205 ಮಸೂದೆಗಳನ್ನು ಅಂಗೀಕರಿಸಲಾಗಿದೆ ಎಂದರು.
16ನೇ ಲೋಕಸಭಾದ ಅಂತ್ಯದ ಹಿನ್ನಲೆಯಲ್ಲಿ ಸಮಾರೋಪ ಭಾಷಣ ಮಾಡಿದ ಅವರು, 2014ರ ಜೂನ್ನಿಂದ ಸಂಸತ್ತಿನಲ್ಲಿ 331ಕಲಾಪಗಳನ್ನು ನಡೆಸಲಾಗಿದೆ, ಇದಕ್ಕೆ 1,612 ಗಂಟೆಗಳನ್ನು ವ್ಯಯಿಸಲಾಗಿದೆ. ಇದರಲ್ಲಿ 422 ಗಂಟೆಗಳು ಗದ್ದಲಗಳಿಂದಾಗಿ ವ್ಯರ್ಥವಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ತರುವಾಯ ಸುಮಿತ್ರಾ ಮಹಾಜನ್ ಅವರನ್ನು ಲೋಕಸಭಾ ಸ್ಪೀಕರ್ ಆಗಿ ನೇಮಕಗೊಳಿಸಲಾಯಿತು.
ಕಲಾಪಗಳನ್ನು ಸುಲಲಿತವಾಗಿ ನಡೆಸಿಕೊಂಡು ಹೋಗಲು ಸಹಕಾರ ನೀಡಿದ ಸದಸ್ಯರುಗಳಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು, ತನ್ನ ಮಾತುಗಳು ಯಾರಿಗಾದರು ನೋವುಂಟು ಮಾಡಿದ್ದರೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ.
ಅಲ್ಲದೇ, ತಾವು ಜನರ ನಿರೀಕ್ಷೆಯ ಮಟ್ಟಕ್ಕೆ ನಡೆದುಕೊಂಡಿದ್ದೇವೆಯೇ ಅಥವಾ ಇಲ್ಲವೇ ಎಂಬುದನ್ನು ಸಂಸತ್ತಿನ ಪ್ರತಿ ಸದಸ್ಯರುಗಳೂ ಆತ್ಮವಿಮರ್ಶೆ ಮಾಡಿಕೊಳ್ಳಬೇಕು, ನಾವು ಏನು ಸಾಧಿಸಿದ್ದೇವೆ ಮತ್ತು ನಾವು ಸಾಧಿಸಲು ಏನು ಬಾಕಿ ಇದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.