ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಫೆ.21-22ರಂದು ಕೊರಿಯಾ ಪ್ರವಾಸವನ್ನು ಹಮ್ಮಿಕೊಳ್ಳಲಿದ್ದಾರೆ. ಪ್ರವಾಸದ ವೇಳೆ ಪ್ರಧಾನಿಯವರಿಗೆ ‘2018 ಸಿಯೋಲ್ ಶಾಂತಿ ಪುರಸ್ಕಾರ’ವನ್ನು ಪ್ರದಾನ ಮಾಡಲಾಗುತ್ತದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ದ್ವಿಪಕ್ಷೀಯ ಸಂಬಂಧದಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಪರಾಮರ್ಶಿಸಲು ಉಭಯ ದೇಶಗಳಿಗೂ ಈ ಭೇಟಿ ಮಹತ್ವದ ಅವಕಾಶವನ್ನು ಕಲ್ಪಿಸಿಕೊಡಲಿದೆ. ಉಭಯ ದೇಶಗಳು ಪ್ರಾದೇಶಿಕ, ಅಂತಾರಾಷ್ಟ್ರೀಯ ಪರಸ್ಪರ ಹಿತಾಸಕ್ತಿಯ ವಿಷಯಗಳ ಬಗ್ಗೆ ಚರ್ಚೆ ನಡೆಸಲಿವೆ. ಈ ಮೂಲಕ ವಿಶೇಷ ಕಾರ್ಯತಾಂತ್ರಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಿದೆ.
ರಿಪಬ್ಲಿಕ್ ಆಫ್ ಕೊರಿಯಾದ ಅಧ್ಯಕ್ಷ ಎಚ್.ಇ.ಮೂನ್ ಜೇ ಇನ್ ಅವರ ಆಹ್ವಾನದ ಮೇರೆಗೆ ಮೋದಿ ಭೇಟಿ ನೀಡುತ್ತಿದ್ದಾರೆ.
ಭಾರತದ ‘ಆಕ್ಟ್ ಈಸ್ಟ್ ಪಾಲಿಸಿ’ಯ ಭಾಗವಾಗಿ ದಕ್ಷಿಣ ಕೊರಿಯಾದೊಂದಿಗೆ ಬಹು-ಆಯಾಮದ ನಿಶ್ಚಯಗಳನ್ನು ಹೆಚ್ಚಿಸುವ ಆದ್ಯತೆಯ ಬಗ್ಗೆ ಪ್ರಧಾನಿ ಭೇಟಿ ಬಿಂಬಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಕಳೆದ ವರ್ಷ ಜುಲೈನಲ್ಲಿ ದ್ವಿಪಕ್ಷೀಯ ಶೃಂಗಸಭೆಗಾಗಿ ಅಧ್ಯಕ್ಷ ಮೂನ್ ಜೇ-ಇನ್ ಭಾರತಕ್ಕೆ ಭೇಟಿ ನೀಡಿದ್ದರು ಮಾತ್ರವಲ್ಲದೇ, ಕೊರಿಯಾದ ಪ್ರಥಮ ಮಹಿಳೆ ಮೇಡಮ್ ಕಿಮ್ ಜಂಗ್-ಸೂಕ್ ಅವರ ಭಾಗವಹಿಸುವಿಕೆಯಲ್ಲಿ ನವೆಂಬರ್ 2018ರಲ್ಲಿ ಅಯೋಧ್ಯಾದಲ್ಲಿ ದೀಪೋತ್ಸವ ಕಾರ್ಯಕ್ರಮ ಜರುಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.