ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾಗಿ ಸುಶೀಲ್ ಚಂದ್ರ ಅವರು ನೇಮಕಗೊಂಡಿದ್ದಾರೆ. 2019ರ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಈ ನೇಮಕ ನಡೆದಿದೆ. 1980ರ ಬ್ಯಾಚ್ನ ಇಂಡಿಯನ್ ರಿವೆನ್ಯೂ ಸರ್ವಿಸ್ ಅಧಿಕಾರಿ ಇವರಾಗಿದ್ದಾರೆ. ಇವರು ಆದಾಯ ತೆರಿಗೆ ಇಲಾಖೆಯ ಸಿಬಿಡಿಟಿಯ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
ಎರಡನೇ ಚುನಾವಣಾ ಆಯುಕ್ತರಾಗಿ ಇವರು ಕಾರ್ಯನಿರ್ವಹಿಸಲಿದ್ದಾರೆ. ಮುಖ್ಯ ಚುನಾವಣಾಧಿಕಾರಿಯಾಗಿ ಸುನೀಲ್ ಆರೋರ ಈಗಾಗಲೇ ನೇಮಕಗೊಂಡಿದ್ದಾರೆ. ಅಶೋಕ್ ಲಾವಸ ಅವರು ಚುನಾವಣಾ ಆಯುಕ್ತರಾಗಿದ್ದಾರೆ.
2016ರ ನವೆಂಬರ್ 1ರಂದು ಇವರು ಸಿಬಿಡಿಟಿಯ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಬಳಿಕ ಮೇ.31ರಂದು ಅವರ ಅವಧಿಯನ್ನು ಒಂದು ವರ್ಷಗಳ ಕಾಲ ವಿಸ್ತರಣೆ ಮಾಡಲಾಯಿತು.
ಶೀಘ್ರದಲ್ಲೇ ಈ ಚುನಾವಣಾ ಆಯೋಗ ಲೋಕಸಭಾ ಚುನಾವಣೆಗಳಿಗೆ ದಿನಾಂಕವನ್ನು ಘೋಷಣೆ ಮಾಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.