ಬೆಂಗಳೂರು: ಪುಲ್ವಾಮ ಭಯೋತ್ಪಾದನಾ ದಾಳಿಗೆ ವೀರ ಮರಣವನ್ನಪ್ಪಿದ ಹೆಮ್ಮೆಯ ಕನ್ನಡಿಗ ಗುರು ಅವರ ಪಾರ್ಥಿವ ಶರೀರ ರಾಜ್ಯಕ್ಕೆ ಆಗಮಿಸಿದೆ. ವಿಮಾನ ನಿಲ್ದಾಣಕ್ಕೆ ಬಂದಿಳಿದ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವಾರು ಗಣ್ಯರು ಪುಷ್ಪನಮನವನ್ನು ಸಲ್ಲಿಸಿದರು.
ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್, ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ಎಚ್.ಎಕೆ ಪಾಟೀಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ಎನ್.ರಾಜು ಮುಂತಾದ ಗಣ್ಯರು ಈ ಉಪಸ್ಥಿತರಿದ್ದು ವೀರ ಹುತಾತ್ಮ ಯೋಧನಿಗೆ ನಮನ ಸಲ್ಲಿಸಿದರು.
ಬಳಿಕ ಮುಖ್ಯಮಂತ್ರಿಗಳು ಗುರು ಕುಟುಂಬಕ್ಕೆ 25 ಲಕ್ಷ ರೂಪಾಯಿಗಳ ಪರಿಹಾರವನ್ನು ಘೋಷಣೆ ಮಾಡಿದರು ಮತ್ತು ಅವರ ಪತ್ನಿ ಕಲಾವತಿಯರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದರು.
ಗುರು ಅವರ ಪಾರ್ಥಿವ ಶರೀರವನ್ನು ಮಿಲಿಟರಿ ವಾಹನದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಮೂಲಕ ಅವರ ಹುಟ್ಟೂರಾದ ಮಂಡ್ಯದ ಮದ್ದೂರಿಗೆ ಕೊಂಡೊಯ್ಯಲಾಗಿದೆ. ಈ ವೇಳೆ ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂದ ಜನರು ಹುತಾತ್ಮ ಯೋಧನಿಗೆ ಪುಷ್ಪ ನಮನಗಳನ್ನು ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.