ನವದೆಹಲಿ: ಕೇಂದ್ರ ಸರ್ಕಾರವು 2019ರ ಜನವರಿ 1ಕ್ಕೆ ಅನುಗುಣವಾಗುವಂತೆ ತುಟ್ಟಿಭತ್ಯೆಯನ್ನು ಶೇ.3ರಷ್ಟು ಹೆಚ್ಚಳ ಮಾಡಿದೆ. ಈ ನಿರ್ಧಾರದಿಂದ ಸುಮಾರು 1.1 ಕೋಟಿ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ಸಹಾಯಕವಾಗಲಿದೆ.
ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಪ್ರಸ್ತುತ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಪಿಂಚಣಿದಾರರಿಗೆ ಇರುವ ಶೇ.9ರಷ್ಟು ತುಟ್ಟಿ ಭತ್ಯೆಗೆ ಹೆಚ್ಚುವರಿಯಾಗಿ ಶೇ.3ರಷ್ಟನ್ನು ಸೇರಿಸಲಾಗಿದೆ. ಜನವರಿ 1, 2019ಕ್ಕೆ ಅನುಗುಣವಾಗುವಂತೆ ಇದು ಜಾರಿಗೊಳ್ಳಲಿದೆ ಎಂದು ಸಂಪುಟ ಸಭೆಯ ಬಳಿಕ ಮಾತನಾಡಿದ ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಈ ಏರಿಕೆಯಿಂದ 48.41 ಲಕ್ಷ ಕೇಂದ್ರ ಸರ್ಕಾರಿ ಉದ್ಯೋಗಿಗಳಿಗೆ ಮತ್ತು 62.03 ಲಕ್ಷ ಪಿಂಚಣಿದಾರರಿಗೆ ಸಹಾಯವಾಗಲಿದೆ.
7ನೇ ವೇತನಾ ಆಯೋಗದ ಶಿಫಾರಸ್ಸಿನ ಅನ್ವಯ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.