ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂ .24 ರಂದು ಕರೆದಿರುವ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಬರಿಯ ಕಾಟಾಚಾರ ಎಂದು ವಿಪಕ್ಷ ನಾಯಕ ಜಗದೀಶ ಶೆಟ್ಟರ್ ಜರಿದಿದ್ದಾರೆ.
ಬೆಳಗಾವಿ ಅಧಿವೇಶನಕ್ಕೆ ಒಂದು ವಾರ ಬಾಕಿ ಉಳಿದಿರುವಾಗ ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ಕರೆದು ತಾನು ರೈತರ ಪರ ಎಂದು ಬಿಂಬಿಸಲು ಸರಕಾರ ಯತ್ನಿಸುತ್ತಿದೆ. ಅಲ್ಲದೇ ರೈತರಿಗೆ ಮರಳು ಮಾಡುತ್ತಿದೆ ಎಂದು ಹೇಳಿದ್ದಾರೆ.
ಸಕ್ಕರೆ ಕಾರ್ಖಾನೆ ಮಾಲೀಕರ ಮೂಲಕ ರೈತರಿಗೆ ಹಣಸಂದಾಯವಾಗಲು ಸಾವಿರಾರು ಕೋಟಿ ಬಾಕಿಯಿದ್ದು ಇಷ್ಟುದಿನ ತಲೆ ಕೆಡಿಸಿಕೊಳ್ಳದ ಸರಕಾರ ಅಧಿವೇಶನಕ್ಕೆ ಕೆಲವೇ ದಿನ ಇರುವಾಗ ಸರಕಾರದ ಈ ನಡೆ ಕೇವಲ ರೈತರ ಕಣ್ಣೊರೆಸುವ ತಂತ್ರ ಎಂದು ಹೇಳಿದ್ದಾರೆ.
ಅಲ್ಲದೇ ಅಧಿವೇಶನದಲ್ಲಿ ಪತಿಪಕ್ಷಗಳ ಪ್ರಶ್ನೆಗೆ ಸರಕಾರ ಉತ್ತರಿಸಬೇಕಾಗುತ್ತದೆ ಇದರಿಂದ ತಾನು ಇಕ್ಕಟ್ಟಿಗೆ ಸಿಲುದನ್ನು ತಪ್ಪಿಸಲು ಸಭೆ ಕರೆಯಲಾಗಿದೆ ಎಂದರು.
ಸರಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ವಿಪಕ್ಷಗಳ ಹೋರಾಟವನ್ನು ಹತ್ತಿಕ್ಕುವ ತಂತ್ರ ಅನುಸರಿಸುತಿದೆ. ಈ ಕಾರಣದಿಂದಾಗಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸರಕಾರವನ್ನು ತರಾಟೆಗೆ ತೆಗದುಕೊಂಡರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.