ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯ ಸಂದರ್ಭ ಅಧಿಕ ಪ್ರಮಾಣದಲ್ಲಿ ಮತದಾನವಾಗುವಂತೆ ಮಾಡಲು ಚುನಾವಣಾ ಆಯೋಗ ಸಾಕಷ್ಟು ಶ್ರಮಿಸುತ್ತಿದೆ. ಈ ಹಿನ್ನಲೆಯಲ್ಲಿ ಮತದಾರರಿಗೆ ವೋಟರ್ ಐಡಿಯನ್ನು ಹೊರತುಪಡಿಸಿಯೂ ಇತರ 11 ದಾಖಲೆಗಳನ್ನು ಬಳಸಿಕೊಂಡು ಮತದಾನ ಮಾಡುವ ಅವಕಾಶವನ್ನು ನೀಡಿದೆ.
ಪಾಸ್ಪೋರ್ಟ್, ಆಧಾರ್ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಬ್ಯಾಂಕ್ ಮತ್ತು ಪೋಸ್ಟ್ ಆಫೀಸ್ನ ಫೋಟೋ ಹೊಂದಿದ ಪಾಸ್ಬುಕ್, ಕೇಂದ್ರ ಮತ್ತು ರಾಜ್ಯ ಸರ್ಕಾರಿ ಉದ್ಯೋಗಿಗಳಿಗೆ ನೀಡಲಾಗಿರುವ ಐಡಿ ಕಾರ್ಡ್, ಮನರೇಗಾ ಜಾಬ್ ಕಾರ್ಡ್, ಕಾರ್ಮಿಕ ಸಚಿವಾಲಯ ನೀಡಿರುವ ಸ್ಮಾರ್ಟ್ ಕಾರ್ಡ್ಗಳನ್ನು ವೋಟರ್ ಐಡಿಗೆ ಪರ್ಯಾಯವಾಗಿ ಬಳಕೆ ಮಾಡಬಹುದಾಗಿದೆ.
ಚುನಾವಣೆ ವೇಳೆ ಸಿಗುವ ಮತದಾನದ ಚೀಟಿಯನ್ನು ಒಂದನ್ನೇ ಬಳಸಿ ಮತದಾನ ಮಾಡಲು ಸಾಧ್ಯವಿಲ್ಲ. ಅದರೊಂದಿಗೆ ವೋಟರ್ ಐಡಿ ಅಥವಾ ಇತರ 11 ದಾಖಲೆಗಳನ್ನು ಬಳಸಿ ಮತದಾನವನ್ನು ಮಾಡಬಹುದಾಗಿದೆ.
ಯಾವುದೇ ಕಾರಣಕ್ಕೂ ಜನರು ಮತದಾನದಿಂದ ವಂಚಿತರಾಗಬಾರದು ಎಂಬುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಚುನಾವಣಾ ಆಯೋಗ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ವಿದೇಶದಲ್ಲಿ ನೆಲೆಸಿರುವ ಭಾರತೀಯರು ಭಾರತಕ್ಕೆ ಬಂದು ಮತದಾನ ಮಾಡುವಾಗ ತಮ್ಮ ಒರಿಜಿನಲ್ ಪಾಸ್ಪೋರ್ಟ್ನ್ನು ಸಲ್ಲಿಕೆ ಮಾಡುವ ಅಗತ್ಯವಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.