ನವದೆಹಲಿ: ಲೋಕಸಭಾ ಚುನಾವಣೆಗೆ ಬಿಜೆಪಿ ಭರದ ಸಿದ್ಧತೆಯನ್ನು ನಡೆಸುತ್ತಿದೆ, ಇಂದು ದೇಶವ್ಯಾಪಿಯಾಗಿ ಬೈಕ್ ರ್ಯಾಲಿಯನ್ನು ಆಯೋಜನೆಗೊಳಿಸಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಮಧ್ಯಪ್ರದೇಶದ ಉಮರಿಯಾದಲ್ಲಿ ಬೈಕ್ ರ್ಯಾಲಿಗೆ ಚಾಲನೆಯನ್ನು ನೀಡಿದ್ದಾರೆ. ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಚಾಲನೆಯನ್ನು ನೀಡಿದ್ದಾರೆ. ಈ ರ್ಯಾಲಿಯ ವೇಳೆ ಮೋದಿ ಸರ್ಕಾರ ಮಾಡಿದ ಸಾಧನೆಗಳನ್ನು ಜನರಿಗೆ ತಲುಪಿಸುವಂತೆ ಕಾರ್ಯಕರ್ತರಿಗೆ ತಿಳಿಸಲಾಗಿದೆ.
‘ವಿಜಯ ಸಂಕಲ್ಪ’ ರ್ಯಾಲಿ ಇದಾಗಿದ್ದು, ಉತ್ತರಪ್ರದೇಶ, ಬಿಹಾರ, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮಬಂಗಾಳದ ಹಲವೆಡೆ ಸೇರಿದಂತೆ ದೇಶದ 3,500 ಕಡೆಗಳಲ್ಲಿ ಇದು ಜರುಗುತ್ತಿದೆ.
ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅಮಿತ್ ಶಾ ಅವರು, ‘ದೇಶವನ್ನು ಬಲಿಷ್ಠಗೊಳಿಸಲು, ಆರ್ಥಿಕತೆಯನ್ನು ಪ್ರಬಲಗೊಳಿಸಲು, ಪಾಕಿಸ್ಥಾನಕ್ಕೆ ದಿಟ್ಟ ಉತ್ತರವನ್ನು ನೀಡಲು ಚುನಾವಣೆ ನಡೆಯಬೇಕೇ ಹೊರತು ವಯಸ್ಸಾದ ನಾಯಕರ ಆಶೋತ್ತರಗಳನ್ನು ಈಡೇರಿಸಲೋ ಅಥವಾ ಕುಟುಂಬದ ರಾಜಕುಮಾರರನ್ನು ಪ್ರಧಾನಿ ಮಾಡಲೋ ಅಲ್ಲ’ ಎಂದಿದ್ದಾರೆ. ಈ ಮೂಲಕ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಟಾಂಗ್ ನೀಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಅಪಾರ ಸಂಖ್ಯೆಯ ಉಗ್ರರು ಹತರಾಗಿದ್ದಾರೆ, ದೇಶದ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.