ಶ್ರೀನಗರ: ಜಮ್ಮು ಕಾಶ್ಮೀರದ ಹಂಡ್ವಾರದ ಕ್ರಲ್ಗುಂಡ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಒರ್ವ ಉಗ್ರವಾದಿಯನ್ನು ಹತ್ಯೆ ಮಾಡಿವೆ.
ಈ ಭಾಗದಲ್ಲಿ ಉಗ್ರವಾದಿಗಳು ಅವಿತುಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ಆಧರಿಸಿ ಭದ್ರತಾ ಪಡೆಗಳು ಇಲ್ಲಿ ಕಾರ್ಯಾಚರಣೆಗೆ ಇಳಿದಿದ್ದವು, ಈ ವೇಳೆ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಒರ್ವ ಉಗ್ರ ಹತನಾಗಿದ್ದಾನೆ. ಇನ್ನೋರ್ವ ಭಯೋತ್ಪಾದಕ ಸೇನಾಪಡೆಯ ಜಂಟಿ ಕಾರ್ಯಾಚರಣೆಯಲ್ಲಿ ಸಿಲುಕಿದ್ದಾನೆಂದು ಹೇಳಲಾಗಿದೆ.
ಪ್ರಸ್ತುತ ಈ ಪ್ರದೇಶದಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ.
ಬುಧವಾರ ಕುಂಗ್ನೂ ಗ್ರಾಮದಲ್ಲಿ ಉಗ್ರರ ಅಡಗು ತಾಣವನ್ನು 44 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು ಕಕಾಶ್ಮೀರ ಪೊಲೀಸರು ಧ್ವಂಸ ಮಾಡಿದ್ದರು.
ಪುಲ್ವಾಮದಲ್ಲಿ ಫೆ.14ರಂದು ನಡೆದ ಸಿಆರ್ಪಿಎಫ್ ಯೋಧರ ಮೇಲಿನ ದಾಳಿಯ ಬಳಿಕ ಜಮ್ಮು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹೈಅಲರ್ಟ್ನಲ್ಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.