ಹೈದರಾಬಾದ್: ತೆಲಂಗಾಣದ ಎಲ್ಲಾ ದೇಗುಲಗಳಲ್ಲೂ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಕ್ಕೊಳಪಡಿಸಲು ಸರ್ಕಾರ ನಿರ್ಧರಿಸಿದೆ. ಹೆಚ್ಚುತ್ತಿರುವ ಮಾಲಿನ್ಯವನ್ನು ತಡೆಗಟ್ಟುವ ಸಲುವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
50 ಮೈಕ್ರೋನ್ಸ್ಗಳಿಗಿಂತ ತೆಳುವಾಗಿರುವ ಪ್ಲಾಸ್ಟಿಕ್ ಬ್ಯಾಗ್ಗಳ ಬಳಕೆಯನ್ನು ರಾಜ್ಯದ ಎಲ್ಲಾ ದೇಗುಲಗಳಲ್ಲೂ ನಿಷೇಧಿಸುವಂತೆ ತೆಲಂಗಾಣ ಪರಿಸರ ಸಚಿವ ಎ.ಇಂದ್ರಕರಣ್ ರೆಡ್ಡಿಯವರು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಅನುಷ್ಠಾನಗೊಳಿಸಿರುವ ಮಾದರಿಯನ್ನು ಅಧ್ಯಯನ ನಡೆಸಿ ಅದೇ ರೀತಿಯಲ್ಲಿ ಪ್ಲಾಸ್ಟಿಕ್ ನಿಷೇಧವನ್ನು ರಾಜ್ಯದಲ್ಲೂ ಅಳವಡಿಸುವಂತೆ ಅವರು ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.
ದೇಗುಲಕ್ಕೆ ಆಗಮಿಸುವ ಭಕ್ತಾದಿಗಳು ಪ್ಲಾಸ್ಟಿಕ್ ಬದಲು, ಹತ್ತಿ ಮತ್ತು ಸೆಣಬಿನ ಬ್ಯಾಗ್ನ್ನು ಬಳಕೆ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದಾರೆ.
ಪ್ಲಾಸ್ಟಿಕ್ ನಿಷೇಧ, ಪರಿಸರ ಸಂರಕ್ಷಣೆಯಂತಹ ವಿಷಯದಲ್ಲಿ ಪರಿಸರ ತಜ್ಞರು, ವಿಜ್ಞಾನಿಗಳು, ಹೋರಾಟಗಾರರು ಸರ್ಕಾರಕ್ಕೆ ಸಲಹೆ ಸೂಚನೆಗಳನ್ನು ನೀಡಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.