ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ದೃಷ್ಟಿಹೀನ ಸ್ನೇಹಿ ವಿವಿಧ ಸರಣಿಯ ನಾಣ್ಯಗಳನ್ನು ಬಿಡುಗಡೆಗೊಳಿಸಿದರು. ಈ ಹೊಸ ಸರಣಿಯ ಭಾಗವಾಗಿ ರೂ.1, ರೂ.2, ರೂ.5, ರೂ.10 ಮತ್ತು ರೂ.20 ಮುಖಬೆಲೆಯ ನಾಣ್ಯಗಳನ್ನು ಬಿಡುಗಡೆಗೊಳಿಸಿದರು.
7, ಲೋಕ ಕಲ್ಯಾಣ ಮಾರ್ಗ್ನಲ್ಲಿ ನಡೆದ ಸಮಾರಂಭದಲ್ಲಿ ಈ ನಾಣ್ಯಗಳನ್ನು ಬಿಡುಗಡೆಗೊಳಿಸಲಾಯಿತು. ಇದರಲ್ಲಿ ಅಂಧ ಮಕ್ಕಳು ಆಹ್ವಾನಿತರಾಗಿದ್ದರು. ಈ ನಾಣ್ಯಗಳನ್ನು ಬಿಡುಗಡೆಗೊಳಿಸುವ ಅವಕಾಶ ಸಿಕ್ಕಿದ್ದಕ್ಕಾಗಿ ಮೋದಿ ಸಂತೋಷ ವ್ಯಕ್ತಪಡಿಸಿದ್ದಾರೆ.
’ನಮ್ಮ ಸರ್ಕಾರವು ಕೊನೆಯ ವ್ಯಕ್ತಿ ಮತ್ತು ಕೊನೆಯ ಮೈಲಿಯನ್ನು ತಲುಪುವ ದೂರದೃಷ್ಟಿಯನ್ನು ಹೊಂದಿದ್ದು, ಆ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದೇವೆ. ಈ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡೇ ಹೊಸ ಸರಣಿಯ ನಾಣ್ಯಗಳನ್ನು ಬಿಡುಗಡೆಗೊಳಿಸಲಾಗಿದೆ’ ಎಂದಿದ್ದಾರೆ.
ಈ ಹೊಸ ನಾಣ್ಯಗಳು ದೃಷ್ಟಿಹೀನರಿಗೆ ಸುಲಭವಾಗಿ ಗುರುತಿಸಲು ಸಹಕಾರಿಯಾಗಿದೆ, ಅವರಲ್ಲಿನ ವಿಶ್ವಾಸವನ್ನು ಇದು ಹೆಚ್ಚಿಸಲಿದೆ ಎಂದಿದ್ದಾರೆ.
ದಿವ್ಯಾಂಗ ಜನರ ಉನ್ನತಿಗಾಗಿ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ, ದಿವ್ಯಾಂಗರಿಗಾಗಿ ಹೊರ ತಂದಿರುವ ಯೋಜನೆಗಳಲ್ಲಿ ಸರ್ಕಾರದ ಸಂವೇದನಾಶೀಲತೆ ಇದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.