ನವದೆಹಲಿ: ನೋಟ್ ಬ್ಯಾನ್ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಣವನ್ನು ಬ್ಯಾಂಕ್ ಖಾತೆಯಲ್ಲಿ ಜಮೆ ಮಾಡಿದ ಮತ್ತು ಆದಾಯ ತೆರಿಗೆ ಇಲಾಖೆಯ ವಿಚಾರಣೆಯ ವೇಳೆ ತಮ್ಮ ಕ್ರಮಕ್ಕೆ ಸರಿಯಾದ ಸಮರ್ಥನೆಯನ್ನು ನೀಡಲು ವಿಫಲರಾದ ಸುಮಾರು 87,000 ತೆರಿಗೆದಾರರ ಮೇಲೆ ನಿಗಾ ಇಡುವಂತೆ ಇಲಾಖೆಯು ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಹಣ ಠೇವಣಿ ಮತ್ತು 2016-17ರ ಆದಾಯ ತೆರಿಗೆ ಪಾವತಿಯ ಬಗ್ಗೆ ವಿವರಗಳನ್ನು ನೀಡುವಂತೆ ಕೋರಿ ಸುಮಾರು 3 ಲಕ್ಷ ಮಂದಿಗೆ ಆದಾಯ ತೆರಿಗೆ ಕಾಯ್ದೆ ಸೆಕ್ಷನ್ 142(1) ಅಡಿಯಲ್ಲಿ ನೋಟಿಸ್ ಜಾರಿಗೊಳಿಸಿದೆ. ಸುಮಾರು 87,000 ಮಂದಿ ತೆರಿಗೆದಾರರು ನೋಟ್ ಬ್ಯಾನ್ ವೇಳೆ ರೂ.2 ಲಕ್ಷಕ್ಕಿಂತ ಹೆಚ್ಚಿನ ಹಣವನ್ನು ಠೇವಣಿ ಮಾಡಿದ ಬಗ್ಗೆ ಯಾವುದೇ ವಿವರಗಳನ್ನು ಇನ್ನೂ ನೀಡಿಲ್ಲ.
ಈ ಹಿನ್ನಲೆಯಲ್ಲಿ ಇಲಾಖೆಯು, ಇವರ ಮೇಲೆ ನಿಗಾ ಇಡುವಂತೆ ತಿಳಿಸಿದ್ದು, ಅವರ ಹಣಕಾಸು ವಹಿವಾಟಿನ ಬಗ್ಗೆ ಮಾಹಿತಿಗಳನ್ನು ಸಂಗ್ರಹ ಮಾಡುತ್ತಿದೆ. ಅವರ ಆದಾಯದ ಮೇಲೆ ಕಣ್ಗಾವಲು ಇರಿಸಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.