ನವದೆಹಲಿ: ಅಯೋಧ್ಯಾ ರಾಮಜನ್ಮಭೂಮಿ ವಿವಾದವನ್ನು ಮಧ್ಯಸ್ಥಿಕೆಯ ಮೂಲಕ ಇತ್ಯರ್ಥಪಡಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಶುಕ್ರವಾರ ತಿಳಿಸಿದೆ. ಅಲ್ಲದೇ, ಮೂರು ಸದಸ್ಯರನ್ನು ಒಳಗೊಂಡ ಮಧ್ಯಸ್ಥಿಕೆ ಸಮಿತಿಯನ್ನೂ ರಚನೆ ಮಾಡಿದೆ. ಈ ಸಮಿತಿಯಲ್ಲಿ ಮಾಜಿ ಸುಪ್ರೀಂಕೋರ್ಟ್ ನ್ಯಾಯಾಧೀಶ ಎಫ್ಎಂ ಇಬ್ರಾಹಿಂ ಖಲಿಫುಲ್ಲಾ, ಆಧ್ಯಾತ್ಮ ಗುರು ಶ್ರೀ ಶ್ರೀ ರವಿ ಶಂಕರ್ ಮತ್ತು ಹಿರಿಯ ವಕೀಲ ಶ್ರೀರಾಮ್ ಪಂಚು ಈ ಸಮಿತಿಯ ಸದಸ್ಯರಾಗಿದ್ದಾರೆ.
ಉತ್ತರಪ್ರದೇಶದ ಫೈಝಾಬಾದ್ನಲ್ಲಿ ಅರ್ಜಿದಾರರನ್ನು ಈ ಸಂಧಾನಕಾರರ ಸಮಿತಿ ಭೇಟಿಯಾಗಲಿದೆ. ಸಭೆಯ ಸಂಪೂರ್ಣ ದೃಶ್ಯವನ್ನು ಚಿತ್ರೀಕರಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಆದರೆ ಗೌಪ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಮಾಧ್ಯಮಗಳಿಗೆ ಈ ಸಂಧಾನ ಪ್ರಕ್ರಿಯೆಯ ವರದಿ ಮಾಡುವುದನ್ನು ನಿರ್ಬಂಧಿಸಲಾಗಿದೆ.
ನಾಲ್ಕು ವಾರಗಳೊಳಗೆ ಸಂಧಾನ ಪ್ರಕ್ರಿಯೆ ಆರಂಭವಾಗಬೇಕು ಮತ್ತು ಎಂಟು ತಿಂಗಳೊಳಗೆ ವರದಿಯನ್ನು ನೀಡಬೇಕು ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರ ನೇತೃತ್ವದ ಐವರು ಸದಸ್ಯರನ್ನೊಳಗೊಂಡ ನ್ಯಾಯಪೀಠ ತಿಳಿಸಿದೆ.
ಸಂಧಾನಕಾರರಿಗೆ ಉತ್ತರಪ್ರದೇಶ ಸರ್ಕಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಬೇಕು ಮತ್ತು ಅಗತ್ಯಬಿದ್ದರೆ ಸಂಧಾನಕಾರರು ಕಾನೂನು ನೆರವನ್ನೂ ಪಡೆದುಕೊಳ್ಳಬಹುದು ಎಂದು ಸುಪ್ರೀಂ ಹೇಳಿದೆ.
ಬುಧವಾರವೂ ಸುಪ್ರೀಂಕೋಟ್ ಸಂಧಾನದ ಸಲೆಹಯನ್ನು ನೀಡಿತ್ತು, ಆದರೆ ನಿರ್ಮೋಹಿ ಅಖಾಡವನ್ನು ಹೊರತುಪಡಿಸಿ ಉಳಿದೆಲ್ಲ ಹಿಂದೂ ಸಂಘಟನೆಗಳು ಇದಕ್ಕೆ ವಿರೋಧಿಸಿದ್ದವು. ಆದರೆ ಮುಸ್ಲಿಂ ಸಂಘಟನೆಗಳು ಕ್ರಮವನ್ನು ಸ್ವಾಗತ ಮಾಡಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.