ನವದೆಹಲಿ: 2019ರ ಲೋಕಸಭಾ ಚುನಾವಣೆಗೆ ದೇಶ ಸಿದ್ಧವಾಗುತ್ತಿದೆ. ರಾಜಕೀಯ ಪಕ್ಷಗಳ ಚಟುವಟಿಕೆಗಳೂ ತೀವ್ರಗೊಳ್ಳುತ್ತಿವೆ. ಕಳೆದ ಬಾರಿ ವಾರಣಾಸಿ ಮತ್ತು ವಡೋದರ ಎರಡೂ ಕ್ಷೇತ್ರಗಳಲ್ಲಿ ನಿಂತು ಭರ್ಜರಿಯಾಗಿ ಯಶಸ್ಸುಗಳಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು ಈ ಬಾರಿ ಯಾವ ಕ್ಷೇತ್ರದಿಂದ ಚುನಾವಣೆಗೆ ನಿಲ್ಲಬಹುದು ಎಂಬ ಕುತುಹೂಲ ಎಲ್ಲರಲ್ಲೂ ಮೂಡಿದೆ.
ಬಿಜೆಪಿ ಮೂಲಗಳ ಪ್ರಕಾರ, ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿಯವರು ವಾರಣಾಸಿಯಲ್ಲಿ ಚುನಾವಣೆಗೆ ನಿಲ್ಲಲಿದ್ದಾರೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಹೊರ ಬಿದ್ದಿಲ್ಲ. ಆದರೆ ಬಿಜೆಪಿಯ ಅತ್ಯುನ್ನತ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸದೀಯ ಸಮಿತಿ ಸಭೆಯಲ್ಲಿ ಮೋದಿ ವಾರಣಾಸಿಯಲ್ಲೇ ಸ್ಪರ್ಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.
ದೆಹಲಿ ಬಿಜೆಪಿ ಕಛೇರಿಯಲ್ಲಿ ಸಂಸದೀಯ ಸಮಿತಿ ಸಭೆ ಜರುಗಿದ್ದು, ಪ್ರಧಾನಿ ಮೋದಿ, ಅಮಿತ್ ಷಾ, ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮುಂತಾದ ಹಿರಿಯ ಮುಖಂಡರುಗಳು ಇದರಲ್ಲಿ ಭಾಗಿಯಾಗಿದ್ದರು. ಹಲವು ಗಂಟೆಗಳ ಕಾಲ ಇಲ್ಲಿ ಚುನಾವಣಾ ತಂತ್ರಗಾರಿಕೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಕಳೆದ ಬಾರಿ ವಾರಣಾಸಿಯಲ್ಲಿ 5,81,022 ಮತಗಳನ್ನು ಪಡೆದು ಮೋದಿಯವರು ಜಯಗಳಿಸಿದ್ದರು. ಅಲ್ಲಿಂದ ಬಳಿಕ ವಾರಣಾಸಿಯಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಂಡಿದೆ. ಹೀಗಾಗಿ ಈ ಬಾರಿಯು ಅಲ್ಲಿಂದಲೇ ಮೋದಿಯವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.