ನವದೆಹಲಿ: ದೇಶದಾದ್ಯಂತ ನಾಗರಿಕ ಮತ್ತು ರಕ್ಷಣಾ ವಲಯದಡಿ 50 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪನೆ ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
‘ನಾಗರಿಕ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪನೆ ಮಾಡಲು ಉದ್ದೇಶಿಸಲಾಗಿದೆ. ಒಂದು ಬಾರಿ ಇವುಗಳು ಕಾರ್ಯಾರಂಭ ಮಾಡಿದರೆ ಸುಮಾರು 50 ಸಾವಿರ ಮಕ್ಕಳು ಇಲ್ಲಿ ವಿದ್ಯಾಭ್ಯಾಸವನ್ನು ಪಡೆಯಲಿದ್ದಾರೆ’ ಎಂದು ಸರ್ಕಾರ ಪ್ರಕಟನೆಯಲ್ಲಿ ತಿಳಿಸಿದೆ.
ಎಡ ತೀವ್ರಗಾಮಿಗಳಿಂದ ಬಾಧಿತ ಪ್ರದೇಶದಲ್ಲಿ ಶಾಲೆಗಳು ನಿರ್ಮಾಣವಾಗಲಿದೆ. ಅಧಿಕಾರಿಗಳ ಪ್ರಕಾರ, 50 ಶಾಲೆಗಳ ನಿರ್ಮಾಣ ಮತ್ತು ಸಿಬ್ಬಂದಿ ವರ್ಗದ ವೇತನಕ್ಕಾಗಿ ಸರ್ಕಾರ ರೂ.1,579.9 ಕೋಟಿಯನ್ನು ವ್ಯಯಿಸಲಿದೆ.
ಕೇಂದ್ರೀಯ ವಿಶ್ವವಿದ್ಯಾಲಯಗಳನ್ನು ನಡೆಸುವ ಕೇಂದ್ರೀಯ ವಿದ್ಯಾಲಯ ಸಂಘಟನೆಯು ಕೇಂದ್ರ ಸರ್ಕಾರದ ಶಾಲೆಗಳ ವ್ಯವಸ್ಥೆಯಾಗಿದೆ, ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯದಡಿ ಇದು ಕಾರ್ಯನಿರ್ವಹಿಸುತ್ತಿದೆ. ದೇಶದಲ್ಲಿ ಒಟ್ಟು 12,002 ಕೇಂದ್ರೀಯ ಶಾಲೆಗಳು ಕಾರ್ಯಾಚರಿಸುತ್ತಿವೆ ಮತ್ತು ಮೂರು ವಿದೇಶದಲ್ಲಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.