ಬೆಳ್ತಂಗಡಿ: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಪಂಗಡದ ಮಲೆಕುಡಿಯ ಜನಾಂಗದ ವಿಶೇಷ ಅಭಿವೃದ್ಧಿ ಯೋಜನೆಯಡಿ ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ., ದ್ವಿತೀಯ ಪಿ.ಯು.ಸಿ. / ಅಂತಿಮ ಪದವಿ ತರಗತಿಗಳಲ್ಲಿ ಪ್ರಥಮ ದರ್ಜೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಜು. 15 ಕೊನೆಯ ದಿನವಾಗಿದೆ.
ಅರ್ಹತಾ ಷರತ್ತುಗಳು: ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡದ ಮಲೆಕುಡಿಯ ಜನಾಂಗಕ್ಕೆ ಸೇರಿರತಕ್ಕದ್ದು. ವಿದ್ಯಾರ್ಥಿಗಳು ಜಾತಿ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ./ ದ್ವಿತೀಯ ಪಿ.ಯು.ಸಿ./ಅಂತಿಮ ಪದವಿ ಅಂಕಪಟ್ಟಿ, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ ಲಗತ್ತಿಬೇಕು. ಅರ್ಜಿ ನಮೂನೆಯನ್ನು ತಾಲೂಕು ಸಮಾಜಕನ್ಯಾಣ ಅಧಿಕಾರಿಗಳ ಕಛೇರಿ, ಬೆಳ್ತಂಗಡಿಯ ಕಛೇರಿ ಕೆಲಸದ ದಿನಗಳಂದು ಪೂರ್ವಾಹ್ನ 10 ರಿಂದ ಸಂಜೆ 5-30ರ ವರೆಗೆ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳ ಪ್ರತಿಯೊಂದಿಗೆ ತಾಲೂಕು ಸಮಾಜ ಕಲ್ಯಾಣಾಧಿಕಾರಿಯವರಿಗೆ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.