ನವದೆಹಲಿ: ಭಾರತದಲ್ಲಿ ಮತ್ತೊಮ್ಮೆ ತುರ್ತು ಪರಿಸ್ಥಿತಿ ಹೇರಿಕೆಯಾಗಲು ಎಂದಿಗೂ ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಮತ್ತೊಮ್ಮೆ ತುರ್ತು ಪರಿಸ್ಥಿತಿಯ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ ಎಂಬ ಬಿಜೆಪಿ ಮುಖಂಡ ಎಲ್.ಕೆ.ಅಡ್ವಾಣಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ವೇಳೆ ಅವರು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.
1975-77ರಲ್ಲಿ ಏರಿಕೆಯಾದ ತುರ್ತು ಪರಿಸ್ಥಿತಿ ಸ್ವತಂತ್ರ ಭಾರತದ ಕರಾಳ ಅಧ್ಯಾಯ, ಆದರೆ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಭಾರತದಲ್ಲಿ ಮತ್ತೊಮ್ಮೆ ಆ ರೀತಿಯ ಸರ್ವಾಧಿಕಾರ ಬರಲು ಸಾಧ್ಯವಿಲ್ಲ ಎಂದಿದ್ದಾರೆ.
ಅಡ್ವಾಣಿ ಪ್ರಧಾನಿ ನರೇಂದ್ರ ಮೊದಿಯವರನ್ನೇ ಮನಸ್ಸಲ್ಲಿಟ್ಟುಕೊಂಡು ಈ ಹೇಳಿಕೆ ನೀಡಿದ್ದಾರೆ ಎಂದು ವಿರೋಧ ಪಕ್ಷಗಳು ಟೀಕಿಸಿದ್ದವು. ಆದರೆ ಬಿಜೆಪಿ ಇದನ್ನು ತಳ್ಳಿ ಹಾಕಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.