ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಐದು ಉಗ್ರವಾದಿಗಳನ್ನು ಹತ್ಯೆ ಮಾಡಲಾಗಿದೆ. ಬಾರಮುಲ್ಲಾ ಜಿಲ್ಲೆಯಲ್ಲಿ ಇಬ್ಬರನ್ನು ಮತ್ತು ಶೋಪಿಯಾನ ಜಿಲ್ಲೆಯಲ್ಲಿ ಒರ್ವ, ಬಂಡಿಪೋರಾದಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ನೆಲಕ್ಕುರುಳಿಸಿವೆ.
ಶುಕ್ರವಾರ ಬಾರಮುಲ್ಲಾದ ಕಂಡಿ ಕ್ರೀರಿಯಲ್ಲಿ ನಡೆಸಲಾದ ಎನ್ಕೌಂಟರ್ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ. ಇದರಲ್ಲಿ ಮೂರು ಭದ್ರತಾ ಪಡೆಗಳಿಗೆ ಗಾಯಗಳಾಗಿವೆ.
ಶೋಪಿಯಾನದ ಇಮಾಮ್ ಶಹೀಬ್ ಏರಿಯಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಮತ್ತೊಬ್ಬ ಉಗ್ರ ಹತ್ಯೆಯಾಗಿದ್ದಾನೆ.
ಅಧಿಕಾರಿಗಳ ಪ್ರಕಾರ, ಶೋಪಿಯಾನದ ಮನೆಯೊಂದರಲ್ಲಿ ಇಬ್ಬರು ಅಥವಾ ಮೂವರು ಉಗ್ರರು ಅವಿತುಕೊಂಡಿದ್ದಾರೆ.
ಇಬ್ಬರು ಲಷ್ಕರ್ ಇ ತೋಯ್ಬಾ ಉಗ್ರರು ಬಂಡಿಪೋರಾ ಜಿಲ್ಲೆಯಲ್ಲಿ ನಡೆದ ಮತ್ತೊಂದು ಎನ್ಕೌಂಟರ್ನಲ್ಲಿ ಬಲಿಯಾಗಿದ್ದಾರೆ. ಒರ್ವ ಹಜಿನ್ ಏರಿಯಾದಲ್ಲಿ ಮೃತಪಟ್ಟಿದ್ದಾನೆ. ಈತ ಪಾಕ್ ಮೂಲದ ಲಷ್ಕರ್ ಸಂಘಟನೆಯ ಕಮಾಂಡರ್ ಅಲಿ ಭಾಯ್ ಎನ್ನಲಾಗಿದೆ.
ಪಿಟಿಐ ವರದಿಯ ಪ್ರಕಾರ, ಉಗ್ರರ ಉಪಸ್ಥಿತಿಯ ಬಗ್ಗೆ ಬಂದ ಖಚಿತ ಮಾಹಿತಿಯನ್ನು ಆಧರಿಸಿ ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.
ಮಾರ್ಚ್ 21 ರಂದು, ಉಗ್ರರು ಬಂಡಿಪೋರಾ ಏರಿಯಾದ ಮನೆಯೊಂದರಲ್ಲಿ ಮನೆಯ ಸದಸ್ಯರನ್ನು ಒತ್ತೆಯಾಗಿರಿಸಿಕೊಂಡು ಅವಿತುಕೊಂಡಿದ್ದಾರೆ ಎಂಬ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಆರಂಭಿಸಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.