ನವದೆಹಲಿ: ಖ್ಯಾತ ಪ್ಯಾರಾ ಒಲಿಂಪಿಕ್ ಕ್ರೀಡಾಪಟು ದೀಪಾ ಮಲಿಕ್ ಅವರು ಸೋಮವಾರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ಹರಿಯಾಣ ಬಿಜೆಪಿ ಮುಖ್ಯಸ್ಥ ಸುಭಾಷ್ ಬರಲ ಮತ್ತು ಪ್ರಧಾನ ಕಾರ್ಯದರ್ಶಿ ಅನಿಲ್ ಜೈನ್ ಅವರ ಸಮ್ಮುಖದಲ್ಲಿ ಅವರು ಪಕ್ಷವನ್ನು ಸೇರಿದ್ದಾರೆ. ಪ್ಯಾರಾ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಯನ್ನು ದೀಪಾ ಹೊಂದಿದ್ದಾರೆ.
‘ದೀಪಾ ಮಲಿಕ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳುತ್ತೇವೆ, ಅವರು ನಮಗೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ. ಆಕೆ ದೇಶವನ್ನು ಹೆಮ್ಮೆ ಪಡಿಸಿದವರು’ ಎಂದು ಜೈನ್ ಹೇಳಿದ್ದಾರೆ.
‘ಮಹಿಳಾ ಸಬಲೀಕರಣಕ್ಕಾಗಿ ಪ್ರಧಾನಿಯವರು ಮಾಡಿದ ಕಾರ್ಯ ಮತ್ತು ಮಹಿಳೆಯರ ಬಗೆಗಿನ ಅವರ ಚಿಂತನೆ ಅತ್ಯುನ್ನತವಾಗಿದೆ. ಮಹಿಳೆಯರಿಗೆ ಅವರು ಪ್ರಮುಖ ಹುದ್ದೆಗಳನ್ನು ನೀಡಿದ್ದಾರೆ. ದಿವ್ಯಾಂಗ ಜನರಿಗಾಗಿ ಅವರು ಸಾಕಷ್ಟು ಶ್ರಮಿಸಿದ್ದಾರೆ’ ಎಂದು ದೀಪಾ ಹೇಳಿದ್ದಾರೆ.
2016ರ ರಿಯೋ ಪ್ಯಾರಾ ಒಲಿಂಪಿಕ್ಸ್ನಲ್ಲಿ ದೀಪಾ ಅವರು ಶಾಟ್ಪುಟ್ನಲ್ಲಿ ಬೆಳ್ಳಿಯ ಪದಕವನ್ನು ಜಯಿಸುವ ಮೂಲಕ ಇತಿಹಾಸವನ್ನು ನಿರ್ಮಾಣ ಮಾಡಿದ್ದರು.
ಮೂಲಗಳ ಪ್ರಕಾರ, ಅವರು ಹರಿಯಾಣದಿಂದ ಲೋಕಸಭಾ ಚುನಾವಣಾ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಈ ಬಗ್ಗೆ ಯಾವುದೇ ಅಧಿಕೃತ ಪ್ರಕಟನೆಯನ್ನು ಬಿಜೆಪಿ ಹೊರಡಿಸಿಲ್ಲ.
ಕೆಲ ದಿನಗಳ ಹಿಂದೆಯಷ್ಟೇ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದರು. ಮೋದಿಯ ಚಿಂತನೆಗಳಿಂದ ಪ್ರಭಾವಿತಗೊಂಡು ಬಿಜೆಪಿ ಸೇರಿದ್ದಾಗಿ ಅವರು ಹೇಳಿಕೊಂಡಿದ್ದರು.
Deepa Malik, Paralympian on joining BJP: The work that PM Modi has done for women empowerment and his thoughts towards women, is evident. He has put women in leading portfolios, he has also worked extensively for the ‘divyangs’. pic.twitter.com/veQwVBarST
— ANI (@ANI) March 25, 2019
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.