ಉಡುಪಿ : ಉಡುಪಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಮಾದ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಂಸದೆ ಶೋಭಾ ಕರಂದ್ಲಾಜೆ ಕಸ್ತೂರಿ ರಂಗನ್ ವರದಿಯ ಕುರಿತು ರಿಪೋರ್ಟ ಅನ್ನು ಇದೇ ಎಪ್ರೀಲ್ 15ರ ಒಳಗೆ ಸುಪ್ರೀಂಕೋರ್ಟಗೆ ಸಲ್ಲಿಸಬೇಕಾಗಿದೆ, ಆದರೆ ಅದರ ಪ್ರಕ್ರೀಯೆ ಇನ್ನು ನಿಧಾನಗತಿಯಲ್ಲಿ ಸಾಗುತ್ತಿದೆ ಪ್ರತಿ ಹಳ್ಳಿಗಳಿಗೆ ಹೋಗಿ ಜನರಿಂದ ವರದಿ ಇನ್ನು ಪಡೆದಿಲ್ಲ ಹೀಗಾದರೆ ಎಪ್ರೀಲ್ 15 ರ ವಳಗೆ ಇವರು ಸುಪ್ರೀಂ ಕೋರ್ಟ ಗೆ ಹೇಗೆ ವರದಿ ಸಲ್ಲಿಸುತ್ತಾರೆ ಎಂದರು.
ಇದೇ ಸಂದರ್ಭದಲ್ಲಿ ಮಾತನಾಡುತ್ತಾ ತೆರಿಗೆ ಸಂಗ್ರಹದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಕಾಂಗ್ರೇಸ್ ಈ ಸರ್ಕಾರದಲ್ಲಿ ತೆರಿಗೆ ಸಂಪೂರ್ಣ ಮದ್ಯವರ್ತಿಗಳ ಪಾಲಾಗುತ್ತಿದೆ, ರವಿಯ ಕೇಸಿನ ಬಳಿಕೆ ಈ ಸರ್ಕಾರದ ಮೇಲೆ ಅಧಿಕಾರಿಗಳಿಗೆ ನಂಬಿಕೆ ಇಲ್ಲದಂತಾಗಿದೆ. ಈ ಸರ್ಕಾರದಲ್ಲಿರುವ ರಾಜಕಾರಣಿಗಳ ಮಕ್ಕಳು ಮರಳು ಗಣಿಗಾರಿಕೆಯಲ್ಲಿ ತೊಡಗಿಕೋಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಮುಖ್ಯಮಂತ್ರಿಗಳಂತೂ ಉಡಾಫೆಯಾಗಿ ಮಾತನಾಡುತ್ತಾರೆ ಅವರು ರವಿಯ ಪ್ರಕರಣವನ್ನು ಸಿಬಿಐಗೆ ಕೋಡಲು ಅವರು ಮಣಿದದ್ದು ಬಿಜೆಪಿ ಹಾಗೂ ಜೆಡಿಎಸ್ ಗೆ ಅಲ್ಲ ಜನರ ಹೋರಾಟಕ್ಕೆ ಜನಗಳು ಮುಂಬರುವ ದಿನಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.