ನವದೆಹಲಿ: ಜಮ್ಮು ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಆರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಓರ್ವನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿದೆ. ಮೂರು ವಿವಿಧ ಎನ್ಕೌಂಟರ್ಗಳನ್ನು ನಡೆಸಿ ಈ ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರಿಂದ ಅಮೆರಿಕಾದ ಎಂ4 ಸ್ನಿಫರ್ ರೈಫಲ್, ಎಕೆ 47 ರೈಫಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗುರುವಾರ ಶೋಪಿಯಾನ ಮತ್ತು ಕುಪ್ವಾರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೃತ ಉಗ್ರರನ್ನು ಸಜದ್ ಖಾಂಡೇ, ಅಖುಬ್ ಅಹ್ಮದ್ ದಾರ್, ಬಶ್ರತ್ ಅಹ್ಮದ್ ಮಿರ್ ಎಂದು ಗುರುತಿಸಲಾಗಿದೆ, ಇವರೆಲ್ಲಾ ಪುಲ್ವಾಮ ನಿವಾಸಿಗಳೆಂದು ಸುದ್ದಿ ಸಂಸ್ಥೆಗಳು ತಿಳಿಸಿವೆ. ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಲಷ್ಕರ್ ಉಗ್ರ ಸಂಘಟನೆಯೊಂದಿಗೆ ಇವರು ಸಂಪರ್ಕದಲ್ಲಿದ್ದರು ಎನ್ನಲಾಗಿದೆ.
ಅಲ್ಲದೇ ಅನಂತ್ ನಾಗ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರ ರಮೀಝ್ ಅಹ್ಮದ್ ದಾರ್ನನ್ನು ಬಂಧನಕ್ಕೊಳಪಡಿಸಲಾಗಿದೆ.
ಶುಕ್ರವಾರ, ಬುದ್ಗಾಂನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರು ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.