ಬೆಂಗಳೂರು: ಇತ್ತೀಚಿಗೆ ನಿಧನರಾದ ಕೇಂದ್ರ ಸಚಿವ ಅನಂತ್ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ಕುಮಾರ್ ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕವಾಗಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಟ್ವೀಟ್ ಮಾಡಿ ಮಾಹಿತಿಯನ್ನು ನೀಡಿದ್ದಾರೆ.
‘ತೇಜಸ್ವಿನಿ ಅನಂತ್ಕುಮಾರ್ ಅವರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯಾಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಆಶಿಸುತ್ತೇನೆ’ ಎಂದು ಯಡಿಯೂರಪ್ಪ ಟ್ವಿಟರಿನಲ್ಲಿ ಬರೆದುಕೊಂಡಿದ್ದಾರೆ.
I am very delighted to announce that Smt. @Tej_AnanthKumar has been appointed as state vice president of @BJP4Karnataka.
Wishing her all the very best.
— Chowkidar B.S. Yeddyurappa (@BSYBJP) April 2, 2019
ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಸಿಗಲಿದೆ ಎಂದು ಹೇಳಲಾಗುತ್ತಿತ್ತು, ಆದರೆ ಕೊನೆ ಕ್ಷಣದಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಕೆಲವು ಅಭಿಮಾನಿಗಳು, ಬೆಂಬಲಿಗರು ಪಕ್ಷೇತರರಾಗಿ ತೇಜಸ್ವಿನಿ ಅನಂತ್ಕುಮಾರ್ ಅವರು ಸ್ಪರ್ಧಿಸಲಿ ಎಂದು ಆಶಿಸಿದ್ದರು. ಆದರೆ ತೇಜಸ್ವಿನಿ ಅನಂತ್ಕುಮಾರ್ ಅವರು ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಶಯದೊಂದಿಗೆ ಎಲ್ಲರೂ ಒಗ್ಗಟ್ಟಾಗಿ ಪಕ್ಷದ ಪರ ಕಾರ್ಯ ನಿರ್ವಹಿಸುವಂತೆ ಬೆಂಬಲಿಗರಲ್ಲಿ ಮನವಿ ಮಾಡಿದ್ದರು. ಇದೀಗ ತೇಜಸ್ವಿನಿ ಅನಂತ್ಕುಮಾರ್ ಅವರಿಗೆ ಪಕ್ಷದಲ್ಲಿ ಪ್ರಮುಖ ಹುದ್ದೆಯನ್ನು ನೀಡಲಾಗಿದೆ.
ಕೇಂದ್ರ ರಸಗೊಬ್ಬರ ಸಚಿವರಾಗಿದ್ದ ಅನಂತ್ ಕುಮಾರ್ ಕುಮಾರ್ ಅವರು, ಕ್ಯಾನ್ಸರ್ ರೋಗದಿಂದಾಗಿ 2018 ರ ನವೆಂಬರ್ನಲ್ಲಿ ವಿಧಿವಶರಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.