ನವದೆಹಲಿ: ಲೋಕಸಭಾ ಚುನಾವಣೆಗೂ ಮುಂಚಿತವಾಗಿ ಮಧ್ಯಪ್ರದೇಶದ ಕಾಂಗ್ರೆಸ್ ಘಟಕ ಚುನಾವಣಾ ಆಯೋಗದ ಪರಿಶೀಲನೆಗಾಗಿ ಕಳುಹಿಸಿಕೊಟ್ಟಿರುವ 9 ಆಡಿಯೋ-ವಿಶ್ಯುವಲ್ ಜಾಹೀರಾತುಗಳ ಪೈಕಿ ಆರು ಜಾಹೀರಾತುಗಳಿಗೆ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.
ಕೆಲವು ಆಕ್ಷೇಪಗಳು ರಫೆಲ್ ಒಪ್ಪಂದಕ್ಕೆ ಸಂಬಂಧಪಟ್ಟವುಗಳು ಎಂದು ಹೇಳಲಾಗುತ್ತಿದೆ. ರಫೆಲ್ ವಿಷಯ ನ್ಯಾಯಾಂಗದ ಮುಂದೆ ಇರುವುದರಿಂದ ಆಕ್ಷೇಪ ವ್ಯಕ್ತಪಡಿಸಲಾಗಿದೆ ಎಂದು ಹೇಳಲಾಗುತ್ತಿದೆ.
‘ಆರು ಮಾತ್ರವಲ್ಲದೇ, ಇನ್ನೂ ಇತರ ಕೆಲವೊಂದು ಜಾಹೀರಾತುಗಳಿಗೂ ಆಕ್ಷೇಪಗಳನ್ನು ವ್ಯಕ್ತಪಡಿಸಲಾಗಿದೆ. ಇತರ 12 ಜಾಹೀರಾತುಗಳಿಗೆ ಸರ್ಟಿಫಿಕೇಶನ್ ಸಮಿತಿಯಿಂದ ಅನುಮೋದನೆ ಸಿಕ್ಕಿದೆ’ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಆಕ್ಷೇಪಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಮಧ್ಯಪ್ರದೇಶ ಚುನಾವಣಾ ಆಯುಕ್ತ ವಿ. ಎಲ್. ಕಾಂತ ರಾವ್ ಅವರು, ಸರ್ಟಿಫಿಕೇಟ್ ನೀಡುವ ಸಂದರ್ಭಗಳಲ್ಲಿ ಕೆಲವೊಂದು ಪ್ರಕ್ರಿಯೆಗಳನ್ನು ಅನುಸರಿಸಲಾಗುತ್ತದೆ, ಯಾರಿಗಾದರೂ ಅಸಮಾಧಾನವಿದ್ದರೆ ಅವರಿಗೆ ಮೇಲ್ಮನವಿ ಸಲ್ಲಿಸುವ ಹಕ್ಕಿದೆ ಎಂದಿದ್ದಾರೆ.
ಕಾಂಗ್ರೆಸ್ ತನ್ನ ಜಾಹೀರಾತುಗಳು ತಿರಸ್ಕೃತಗೊಂಡಿರುವುದಕ್ಕೆ ಮೇಲ್ಮನವಿಯನ್ನು ಸಲ್ಲಿಸಲು ಮುಂದಾಗಿದೆ. ಈ ಬಗ್ಗೆ ಅದರ ಮೀಡಿಯಾ ಸೆಲ್ ಮುಖ್ಯಸ್ಥೆ ಶೋಭಾ ಓಝಾ ಮಾಹಿತಿ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.