ಶ್ರೀನಗರ: ಜಮ್ಮು ಕಾಶ್ಮೀರದ 919 ಮಂದಿಯ ಭದ್ರತೆಯನ್ನು ಹಿಂಪಡೆಯಲಾಗಿದೆ, ಇದರಲ್ಲಿ 22 ಮಂದಿ ಪ್ರತ್ಯೇಕತಾವಾದಿ ನಾಯಕರುಗಳೂ ಸೇರಿದ್ದಾರೆ ಎಂದು ಗೃಹ ಸಚಿವಾಲಯ ಶುಕ್ರವಾರ ಹೇಳಿದೆ.
‘2018ರ ಜೂನ್ 20ರಲ್ಲಿ ರಾಜ್ಯಪಾಲರ ಆಡಳಿತ ಜಾರಿಯಾದ ಬಳಿಕ ಜಮ್ಮು ಕಾಶ್ಮೀರ ಸರ್ಕಾರ 919 ಸೇವೆಯಲ್ಲಿಲ್ಲದ ವ್ಯಕ್ತಿಗಳ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಂಡಿದೆ. ಇದರಿಂದಾಗಿ 2,768 ಪೊಲೀಸ್ ಸಿಬ್ಬಂದಿ ಮತ್ತು 389 ವಾಹನಗಳು ವ್ಯಕ್ತಿಗಳ ಭದ್ರತಾ ಸೇವೆಯಿಂದ ಮುಕ್ತವಾಗಿದೆ’ ಎಂದು ಗೃಹ ಸಚಿವಾಲಯ ತಿಳಿಸಿದೆ.
ಜಮ್ಮು ಕಾಶ್ಮೀರದ ಪೊಲೀಸ್ ಸಂಪನ್ಮೂಲವನ್ನು ದುರ್ಬಳಕೆ ಮಾಡಿಕೊಳ್ಳುವುದರ ವಿರುದ್ಧ ಕೇಂದ್ರ ಸರ್ಕಾರ ಕಠಿಣ ಕ್ರಮವನ್ನು ಜರುಗಿಸಲು ಮುಂದಾದ ಬಳಿಕ ಈ ಬೆಳವಣಿಗೆ ನಡೆದಿದೆ.
ಸೇವೆಯಲ್ಲಿಲ್ಲದ ವ್ಯಕ್ತಿಗಳು ಭದ್ರತೆಯನ್ನು ಪಡೆದುಕೊಳ್ಳುತ್ತಿರುವುದರಿಂದ ಜಮ್ಮು ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಸಿಬ್ಬಂದಿಗಳ ಕೊರತೆ ಕಾಡುತ್ತಿದೆ, ಸರ್ಕಾರಿ ಖಜಾನೆಗೆ ನಷ್ಟವಾಗುತ್ತಿದೆ ಎಂದು ಸರ್ಕಾರ ಹೇಳಿದೆ.
ಅಗತ್ಯಕ್ಕಿಂತ ಹೆಚ್ಚು ಭದ್ರತಾ ಸಿಬ್ಬಂದಿಗಳನ್ನು ಹೊಂದಿರುವವರಿಂದಲೂ ಸಿಬ್ಬಂದಿಗಳನ್ನು ಹಿಂದಕ್ಕೆ ಕರೆಸಲಾಗಿದೆ. ಯೋಗ್ಯರಾಗಿದ್ದವರಿಗೆ ಮಾತ್ರ ಭದ್ರತೆಯನ್ನು ಉಳಿಸಿಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದೆ.
ಜಮ್ಮು ಕಾಶ್ಮೀರ ರಾಜ್ಯ ಭದ್ರತಾ ಪರಿಶೀಲನಾ ಸಮಿತಿಯು ಸಕ್ರಿಯವಾಗಿ ಸಭೆಗಳನ್ನು ನಡೆಸಿ, ಪರಿಶೀಲನೆಗಳನ್ನು ನಡೆಸಿ 22 ಪ್ರತ್ಯೇಕತಾವಾದಿಗಳು ಸೇರಿದಂತೆ 919 ಮಂದಿ ಭದ್ರತೆಯನ್ನು ಹಿಂದಕ್ಕೆ ಪಡೆದುಕೊಂಡಿದೆ ಮತ್ತು ಭದ್ರತೆಯನ್ನು ಒದಗಿಸಲು ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.