ನವದೆಹಲಿ: ವಿಶ್ವ ಆರೋಗ್ಯ ದಿನಾಚರಣೆ ಮತ್ತು ಚೈತ್ರ ನವರಾತ್ರಿಯ ಆರಂಭವನ್ನು ಸಂಭ್ರಮಿಸುವ ಸಲುವಾಗಿ ಭಾನುವಾರ ರಾಷ್ಟ್ರೀಯ ಗಂಗಾ ಶುದ್ಧೀಕರಣ ಮಿಶನ್, ರಾಷ್ಟ್ರ ರಾಜಧಾನಿಯ ಕಲಿಂಡಿ ಕುಂಜ್ನಲ್ಲಿ ಯಮುನ ಘಾಟ್ನ ಶುದ್ಧೀಕರಣ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ.
ವಿದ್ಯಾರ್ಥಿಗಳು ಸೇರಿದಂತೆ ಅಪಾರ ಸಂಖ್ಯೆಯ ಸ್ವಯಂಸೇವಕರು ಈ ಶುದ್ಧೀಕರಣ ಕಾರ್ಯದಲ್ಲಿ ಕೈಜೋಡಿಸಿದರು. ‘ನಮಾಮಿ ಗಂಗೆ’ ಸ್ವಯಂಸೇವಕರು ಸೇರಿದಂತೆ ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು, ಅಮೇಥಿ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು, ಐಪಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಇದರಲ್ಲಿ ಅತ್ಯುತ್ಸಾಹದಿಂದ ಭಾಗವಹಿಸಿದ್ದಾರೆ. ಗೌತಮ್ ಗಂಭೀರ್ ಫೌಂಡೇಶನ್ನಿನ ಅಪಾರ ಸಂಖ್ಯೆ ಸ್ವಯಂಸೇವಕರು ಇದರಲ್ಲಿ ಭಾಗಿಯಾಗಿದ್ದಾರೆ.
ರಾಷ್ಟ್ರೀಯ ಗಂಗಾ ಶುದ್ಧೀಕರಣ ಮಿಶನ್, ದೆಹಲಿಯಲ್ಲಿನ ಯಮುನಾ ಘಾಟ್ ಅನ್ನು ದತ್ತುಪಡೆದುಕೊಂಡು ಸಕ್ರಿಯವಾಗಿ ಅಲ್ಲಿ ಸ್ವಚ್ಛತಾ ಕಾರ್ಯವನ್ನು ಮಾಡುತ್ತಿದೆ. ಅಪಾರ ಪ್ರಮಾಣದ ಸ್ವಯಂಸೇವಕರು ಈ ಕಾರ್ಯದಲ್ಲಿ ಭಾಗಿಯಾಗಿದ್ದು, ಮಿಶನ್ನಿನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ.
ಗಂಗಾ ನದಿಯಂತೆಯೇ ಯಮುನಾ ನದಿ ಮತ್ತು ಅದರ ತಟದಲ್ಲಿರುವ ಘಾಟ್ಗಳ ಸ್ವಚ್ಛತೆಗೆ ಕೇಂದ್ರ ಸರ್ಕಾರ ಹೆಚ್ಚಿನ ಉತ್ತೇಜವನ್ನು ನೀಡುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.