ಬೆಂಗಳೂರು: ಕರ್ನಾಟಕದ 28 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಒಟ್ಟು 478 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಎಪ್ರಿಲ್ 18ರಂದು ಮೊದಲ ಹಂತದ ಚುನಾವಣೆಯಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ, ಎಪ್ರಿಲ್ 23ರಂದು ನಡೆಯಲಿರುವ ಎರಡನೇ ಹಂತದ ಚುನಾವಣೆಯಲ್ಲಿ ಮತ್ತೆ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 5.11 ಕೋಟಿ ಅರ್ಹ ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
ಮೊದಲ ಹಂತದ ಚುನಾವಣೆಯಲ್ಲಿ 241 ಮಂದಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ, ಎರಡನೇ ಹಂತದಲ್ಲಿ 237 ಮಂದಿ ಸ್ಪರ್ಧಿಸುತ್ತಿದ್ದಾರೆ. 5.11 ಕೋಟಿ ಅರ್ಹ ಮತದಾರರ ಪೈಕಿ 2.58 ಕೋಟಿ ಪುರುಷರು ಮತ್ತು 2.52 ಕೋಟಿ ಮಹಿಳಾ ಮತದಾರರಾಗಿದ್ದಾರೆ. 4661 ತೃತೀಯ ಲಿಂಗಿ ಮತದಾರರು ಇದ್ದಾರೆ.
28 ಕ್ಷೇತ್ರಗಳಲ್ಲಿ ಒಟ್ಟು 58,186 ಮತಗಟ್ಟೆಗಳನ್ನು ಸ್ಥಾಪನೆ ಮಾಡಲಾಗುತ್ತಿದೆ. ಮೊದಲ ಹಂತದ 14 ಕ್ಷೇತ್ರಗಳಲ್ಲಿ 30,164 ಮತಗಟ್ಟೆಗಳು ಇದ್ದಾರೆ, ಎರಡನೇ ಹಂತದ 14 ಕ್ಷೇತ್ರಗಳಲ್ಲಿ 28,022 ಮತಗಟ್ಟೆಗಳಿವೆ.
ಮಹಿಳೆಯರಿಂದಲೇ ನಿರ್ವಹಿಸಲ್ಪಡುವ 639 ಸಖಿ ಮತಗಟ್ಟೆಗಳು, ದಿವ್ಯಾಂಗರಿಗಾಗಿ 96 ಮತಗಟ್ಟೆಗಳು, ಬುಡಕಟ್ಟು ಸಂಸ್ಕೃತಿ ಬಿಂಬಿಸುವ 39 ಎಥ್ನಿಕ್ ಮತಗಟ್ಟೆಗಳನ್ನು ತೆರೆಯಲಾಗಿದೆ.
ಈ ಬಾರಿ 5,580 ಮಂದಿ ಶತಾಯುಷಿ ಮತದಾರರಿದ್ದಾರೆ. 90 ರಿಂದ 99 ವರ್ಷದ ಸುಮಾರು 1,47,213 ಮತದಾರರಿದ್ದಾರೆ. 10 ಲಕ್ಷ ಮತದಾರರು 18-19 ವಯಸ್ಸಿನವರಾಗಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು 28. 48 ಲಕ್ಷ ಮತದಾರರಿದ್ದಾರೆ. ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಅತಿ ಕಡಿಮೆ 15. 13 ಲಕ್ಷ ಮತದಾರರಿದ್ದಾರೆ. ಎರಡನೇ ಹಂತದಲ್ಲಿ ಚುನಾವಣೆ ನಡೆಯಲಿರುವ ಬೆಳಗಾವಿಯಲ್ಲಿ ಅತಿ ಹೆಚ್ಚಿನ ಮಂದಿ ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. ರಾಯಚೂರಿನಲ್ಲಿ ಕೇವಲ 5 ಮಂದಿ ಮಂದಿ ಸ್ಪರ್ಧಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.