ಶ್ರೀನಗರ: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಗೆ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.
ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಗಹಾಂಡ್ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆ ಬೆಳಗಿನ ಜಾವ ಉಗ್ರರಿಗಾಗಿ ಹುಡುಕಾಟ ನಡೆಸಿತ್ತು. ಈ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿಯನ್ನು ನಡೆಸಿದ್ದಾರೆ. ಹೀಗಾಗಿ ಎನ್ಕೌಂಟರ್ ಆರಂಭವಾಗಿದೆ.
ಘಟನೆಯಲ್ಲಿ ಇಬ್ಬರು ಭಯೋತ್ಪಾದಕರು ಮೃತಪಟ್ಟಿದ್ದಾರೆ, ಆದರೆ ಇವರು ಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನೂ ಖಚಿತಗೊಂಡಿಲ್ಲ.
ಕಣಿವೆ ರಾಜ್ಯದಲ್ಲಿ ಭಯೋತ್ಪಾದಕರನ್ನು ಹತ್ತಿಕ್ಕುವ ಕಾರ್ಯವನ್ನು ಭದ್ರತಾ ಪಡೆಗಳು ನಿರಂತರವಾಗಿ ನಡೆಸುತ್ತಿದ್ದು, ಮೇಲುಗೈಯನ್ನು ಸಾಧಿಸಿವೆ. ಪುಲ್ವಾಮ ದಾಳಿಯ ಬಳಿಕ ಅಪಾರ ಪ್ರಮಾಣದ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.