ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಇಂದು ಪ್ರಕಟಿಸಿದ್ದು, ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ದಕ್ಷಿಣಕನ್ನಡ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ. ಕೊಡಗು ಮೂರನೇ ಸ್ಥಾನ ಪಡೆದುಕೊಂಡಿದೆ. ಒಟ್ಟು 61.73% ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಶೇ. 68.24 ಬಾಲಕಿಯರು ಹಾಗೂ ಶೇ. 55.29 ಬಾಲಕರು ತೇರ್ಗಡೆ ಹೊಂದಿದ್ದಾರೆ.
ಮಾ.1 ರಿಂದ 18ರ ವರೆಗೆ 2019ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿದ್ದು, ಅದರ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸಿ.ಶಿಖಾ ಅವರು ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಿದ್ದಾರೆ.
ಫಲಿತಾಂಶವು ಇಂದು ಮಧ್ಯಾಹ್ನ 12 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ವೆಬ್ಸೈಟ್ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಬಳಸಿ ಇಲಾಖೆ ವೆಬ್ಸೈಟ್ pue.kar.nic.in/ www. karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಏ.16 ರಂದು ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರತಿವರ್ಷದಂತೆ ಈ ವರ್ಷವೂ ಹೆಣ್ಣುಮಕ್ಕಳೇ ಮೇಲುಗೈಯನ್ನು ಸಾಧಿಸಿದ್ದಾರೆ.
ಚಿತ್ರದುರ್ಗಾ ಜಿಲ್ಲೆ ಫಲಿತಾಂಶದಲ್ಲಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ.
ಉಡುಪಿ ಜಿಲ್ಲೆಯಲ್ಲಿ ಶೇ.92.20 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ, ದಕ್ಷಿಣ ಕನ್ನಡದಲ್ಲಿ ಶೇ.83.31 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.