ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಎಪ್ರಿಲ್ 26 ರಂದು ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮೋದಿಯವರು ನಾಮಪತ್ರವನ್ನು ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಎರಡು ಮೆಗಾ ಸಮಾವೇಶಗಳನ್ನು ಆಯೋಜನೆಗೊಳಿಸಲು ಬಿಜೆಪಿ ಕಾರ್ಯಕರ್ತರು ಸಜ್ಜಾಗಿದ್ದಾರೆ. ಬೃಹತ್ ರೋಡ್ ಶೋಗಳೂ ನಡೆಯಲಿವೆ.
ಮೂಲಗಳ ಪ್ರಕಾರ, ಎಪ್ರಿಲ್ 25 ರಂದು ವಾರಣಾಸಿಗೆ ತೆರಳಲಿದ್ದಾರೆ, ಬನಾರಸ್ ಹಿಂದೂ ವಿಶ್ವವಿದ್ಯಾಲಯದಿಂದ ದಶಾಶ್ವಮೇಧ ಘಾಟ್ವರೆಗೆ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋ ಬಳಿಕ, ಮೋದಿಯವರು ಕಾಲ ಭೈರವಿ ದೇಗುಲಕ್ಕೆ ಭೇಟಿ ನೀಡಲಿದ್ದಾರೆ, ಬಳಿಕ ಗಂಗಾ ಆರತಿ ನಡೆಸಲಿದ್ದಾರೆ.
ವರದಿಗಳ ಪ್ರಕಾರ, ಎಪ್ರಿಲ್ 26 ರಂದು ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಲಿದ್ದಾರೆ. ಅಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ರೋಡ್ ಶೋನಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ನಾಮಪತ್ರವನ್ನು ಸಲ್ಲಿಕೆ ಮಾಡಲಿದ್ದಾರೆ.
2014ರಲ್ಲೂ ಮೋದಿಯವರು ವಾರಣಾಸಿಯಿಂದ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿ ಅತ್ಯಧಿಕ ಅಂತರದಿಂದ ವಿಜಯಿಶಾಲಿಯಾಗಿದ್ದರು. ಈ ಬಾರಿಯೂ ಅವರು ಭಾರೀ ಅಂತರದಿಂದ ಗೆಲ್ಲುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.