ರಾಯಚೂರು: ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬಳನ್ನು ಅತ್ಯಾಚಾರ ಮಾಡಿ, ಬರ್ಬರವಾಗಿ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ಯುವತಿಯನ್ನು ಮಧು ಪತ್ತರ್ ಎಂದು ಗುರುತಿಸಲಾಗಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಈಕೆಯ ಶವ ಪತ್ತೆಯಾಗಿದೆ. ಆದರೆ ಈ ಘೋರ ದುರಂತದ ಬಗ್ಗೆ ಮಾಧ್ಯಮಗಳು, ಬುದ್ಧಿಜೀವಿಗಳು ಮಹಾ ಮೌನವನ್ನು ತಾಳಿರುವುದು ಅಲ್ಲದೆ ಸರ್ಕಾರ ಕೂಡಾ ಮೌನವಾಗಿರುವುದು ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿದೆ.
ಮೊದಲು ಇದು ಆತ್ಮಹತ್ಯೆ ಎಂದು ನೇತಾಜೀ ನಗರದಲ್ಲಿ ಪ್ರಕರಣ ದಾಖಲಾಗಿತ್ತು, ಆದರೆ ಬಳಿಕ ಯುವತಿಯ ಪೋಷಕರು, ಕಾಲೇಜು ವಿದ್ಯಾರ್ಥಿಗಳು ವಿರೋಧ ವ್ಯಕ್ತಪಡಿಸಿದ ಬಳಿಕ ಅತ್ಯಾಚಾರ ಮತ್ತು ಕೊಲೆ ಎಂದು ದಾಖಲು ಮಾಡಲಾಗಿದೆ. ಮಧು ತಾಯಿ ರೇಣುಕಾದೇವಿ ನೀಡಿರುವ ದೂರಿನ ಮೇರೆಗೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿ ಸುದರ್ಶನ್ ಎಂಬಾತನನ್ನು ಬಂಧಿಸಲಾಗಿದೆ. ಇನ್ನೂ ಎರಡು ಮೂರು ದಿನದಲ್ಲಿ ಮರಣೋತ್ತರ ಪರೀಕ್ಷೆಯ ವರದಿ ಬರಲಿದ್ದು ಸತ್ಯಾಂಶ ಹೊರಬರಲಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳು ಮಧುವನ್ನು ಕೊಲೆ ಮಾಡಲಾಗಿದೆ ಎಂದು ಬಲವಾದ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ದುಷ್ಕರ್ಮಿಗಳನ್ನು ಆದಷ್ಟು ಬೇಗ ಬಂಧಿಸುವಂತೆ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ #JusticeForMadhu ಎಂಬ ಹ್ಯಾಶ್ಟ್ಯಾಗ್ನೊಂದಿಗೆ ಹಲವರು ಟ್ವೀಟ್ ಮಾಡುತ್ತಿದ್ದಾರೆ. ಅಮಾಯಕ ಹುಡುಗಿ ಹಿಂದೂ ಆಗಿರುವ ಕಾರಣಕ್ಕೆ ಬುದ್ಧಿಜೀವಿಗಳು ಯಾರೊಬ್ಬರೂ ಮಾತನಾಡುತ್ತಿಲ್ಲ. ಮಧುಗೆ ನ್ಯಾಯ ಸಿಗುವವರೆಗೆ ಹೋರಾಡೋಣ ಎಂದು ಬಹಳಷ್ಟು ಜನರು ಟ್ವೀಟ್ ಮಾಡುತ್ತಿದ್ದಾರೆ.
ಆದರೆ ಚುನಾವಣಾ ಸುದ್ದಿಯಲ್ಲೇ ಬ್ಯೂಸಿಯಾಗಿರುವ ಮಾಧ್ಯಮಗಳಿಗೆ ಅಮಾಯಕ ಯುವತಿಯೊಬ್ಬಳ ಘನಘೋರ ಸಾವನ್ನು ಖಂಡಿಸಿ, ಪೊಲೀಸರಿಗೆ ಚುರುಕು ಮುಟ್ಟಿಸುವಷ್ಟು, ಸರ್ಕಾರವನ್ನು ಎಚ್ಚರಿಸುವಷ್ಟು ಸಮಯ ಇಲ್ಲ ಎಂಬುದು ದುರಾದೃಷ್ಟಕರ. ಸಣ್ಣ ಪುಟ್ಟ ಗಲಾಟೆಗೂ ದೊಡ್ಡ ದೊಡ್ಡ ಹೇಳಿಕೆಗಳನ್ನು ಕೊಡುವ ಬುದ್ಧಿಜೀವಿಗಳು ಮೌನವಾಗಿದ್ದಾರೆ. ಸರ್ಕಾರ ಚಿರನಿದ್ರೆಯಲ್ಲಿದ್ದಂತೆ ಇದೆ.
ತಪ್ಪಿತಸ್ಥರು ಯಾರೇ ಇರಲಿ, ಅವರನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು, ವಿದ್ಯಾರ್ಥಿನಿಯ ಸಾವಿಗೆ ನ್ಯಾಯ ಒದಗಿಸಬೇಕು, ಸರ್ಕಾರ ಎಚ್ಚೆತ್ತು ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಬೇಕು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.