ನವದೆಹಲಿ: ಬಾಲಿವುಡ್ನ ಖ್ಯಾತ ನಟ ಸನ್ನಿ ಡಿಯೋಲ್ ಅವರು ಮಂಗಳವಾರ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಂಡಿದ್ದಾರೆ. ದೆಹಲಿಯ ಬಿಜೆಪಿ ಕೇಂದ್ರ ಕಛೇರಿಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಸಚಿವ ಪಿಯೂಶ್ ಗೋಯಲ್ ಅವರ ಸಮ್ಮುಖದಲ್ಲಿ ಇವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು.
ಸನ್ನಿ ಡಿಯೋಲ್ ಅವರು ಬಾಲಿವುಡ್ನ ಲೆಜೆಂಡರಿ ನಟ ಧರ್ಮೆಂದ್ರ ಅವರ ಪುತ್ರನಾಗಿದ್ದಾರೆ. ಧರ್ಮೆಂದ್ರ ಅವರು 2004ರಲ್ಲಿ ಬಿಜೆಪಿ ಟಿಕೆಟಿನಿಂದ ಬಿಕನೇರ್ನಿಂದ ಸ್ಪರ್ಧಿಸಿ ವಿಜಯವನ್ನೂ ಪಡೆದುಕೊಂಡಿದ್ದರು. ಇತ್ತೀಚಿಗೆ ಧರ್ಮೇಂದ್ರ ಅವರೂ ತಮ್ಮ ಪತ್ನಿ ಹಾಗೂ ಮಥುರಾ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ಪರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದರು.
ನಿನ್ನೆಯಷ್ಟೇ ಸನ್ನಿ ಡಿಯೋಲ್ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸನ್ನಿ, ”ನನ್ನ ತಂದೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜೊತೆ ಇದ್ದಂತೆ, ನಾನು ಮೋದಿಯವರ ಜೊತೆ ಇರುತ್ತೇನೆ. ಮುಂದಿನ 5 ವರ್ಷಗಳ ಕಾಲ ಮೋದಿಯವರನ್ನು ಪ್ರಧಾನಿಯಾಗಿ ನೋಡಲು ಬಯಸುತ್ತೇನೆ” ಎಂದಿದ್ದಾರೆ.
ಈ ವೇಳೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಸನ್ನಿ ನಟಿಸಿರುವ 1997ರ ಬ್ಲಾಗ್ ಬಾಸ್ಟರ್ ಮೂವಿ ‘ಬಾರ್ಡರ್’ ಅನ್ನು ಸ್ಮರಿಸಿಕೊಂಡರು. 1971ರ ಕಾರ್ಗಿಲ್ ಯುದ್ಧವನ್ನು ಆಧರಿಸಿದ ಸಿನಿಮಾ ಇದಾಗಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.