ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ನಿಗೂಢ ಸಾವಿನ ಕುರಿತ ‘ತಾಷ್ಕೆಂಟ್ ಫೈಲ್ಸ್’ ಸಿನಿಮಾ ವೀಕ್ಷಕರನ್ನು ಸೆಳೆಯುತ್ತಿದ್ದು ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಖ್ಯಾತ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ.
ಈ ಸಿನಿಮಾ ಕೇವಲ 160 ಸ್ಕ್ರೀನ್ಗಳಲ್ಲಿ ಬಿಡುಗಡೆಗೊಂಡಿದ್ದು, ಆದರೆ ಅದರಲ್ಲೂ 4.75 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವಲ್ಲಿ ಯಶಸ್ವಿಯಾಗಿದೆ.
ಈ ಸಿನಿಮಾದಲ್ಲಿ ನಾಸೀರುದ್ದೀನ್ ಶಾ, ಪಲ್ಲವಿ ಜೋಶಿ, ಶ್ವೇತಾ ಬಸು, ಪಂಕಜ್ ತ್ರಿಪಾಠಿ, ಮಿಥುನ್ ಚಕ್ರವರ್ತಿ, ವಿನಯ್ ಪಾಠಕ್ ಮುಂತಾದವರು ಪ್ರಮುಖ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.
ರಾಜಕೀಯ ನಾಯಕನೊಬ್ಬನ ಬಗೆಗಿನ ರಾಜಕೀಯವಿಲ್ಲದ ಸಿನಿಮಾ ಇದಾಗಿದ್ದು, ಚಿತ್ರದ ನಿರ್ಮಾಣದುದ್ದಕ್ಕೂ ಜನರ ಸಲಹೆಗಳನ್ನು ಪಡೆಯಲಾಗಿದೆ.
ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಹಾಕಲೆಂದು ತಾಷ್ಕೆಂಟ್ಗೆ ತೆರಳಿದ್ದ ಸಂದರ್ಭದಲ್ಲಿ ಲಾಲೂ ಬಹುದ್ದೂರ್ ಶಾಸ್ತ್ರೀ ಅವರು ನಿಗೂಢವಾಗಿ ಸಾವನ್ನಪ್ಪಿದ್ದರು. ಇದುವರೆಗೂ ಅವರು ಹೇಗೆ ಸಾವನ್ನಪ್ಪಿದರು ಎಂಬುದು ನಿಗೂಢವಾಗಿಯೇ ಉಳಿದು ಹೋಗಿದೆ.
1965ರಲ್ಲಿ ಪಾಕಿಸ್ಥಾನ ಮತ್ತು ಭಾರತದ ನಡುವಣ 17 ದಿನಗಳ ಯುದ್ಧವನ್ನು ಅಂತ್ಯಗೊಳಿಸುವ ಸಲುವಾಗಿ ಪಾಕಿಸ್ಥಾನದ ಅಧ್ಯಕ್ಷ ಆಯೂಬ್ ಖಾನ್ ಮತ್ತು ಶಾಸ್ತ್ರೀ ಅವರು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಹಾಕಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.