ನವದೆಹಲಿ: ಸಾದ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರನ್ನು ಭೋಪಾಲ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸಿರುವ ನಿರ್ಧಾರವನ್ನು ಸಮರ್ಥಿಸಿಕೊಂಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಹಿಂದೂಗಳು ಭಯೋತ್ಪಾದಕರಾಗಲು ಎಂದಿಗೂ ಸಾಧ್ಯವಿಲ್ಲ ಎಂದಿದ್ದಾರೆ.
ಮಧ್ಯಪ್ರದೇಶದ ಚಾತರಪುರ್ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ”ಹಿಂದೂಗಳು ಭಯೋತ್ಪಾದಕರಾಗಲು ಸಾಧ್ಯವಿಲ್ಲ. ಹಿಂದೂ ಸಂಸ್ಕೃತಿ ಯಾರಿಗೂ ಹಾನಿ ಮಾಡಿಲ್ಲ. ಆದರೆ ಕಾಂಗ್ರೆಸ್ ಪಕ್ಷ ಹಿಂದೂಗಳನ್ನು ಭಯೋತ್ಪಾದಕರು ಎಂದು ಬಿಂಬಿಸಲು ಹೊರಟಿತ್ತು. ಪ್ರಗ್ಯಾ ಸಿಂಗ್ ಅವರು ಸ್ಪರ್ಧೆ ಅದರ ವಿರುದ್ಧದ ಸತ್ಯಾಗ್ರಹವಾಗಿದೆ” ಎಂದಿದ್ದಾರೆ.
“ಮಧ್ಯಪ್ರದೇಶದ ಜನರು ದಿಗ್ಗಿ ರಾಜ (ಕಾಂಗ್ರೆಸ್ ಅಭ್ಯರ್ಥಿ ದಿಗ್ವಿಜಯ್ ಸಿಂಗ್) ಅವರಿಗಾಗಿ ಕಾಯುತ್ತಿದ್ದು, ಹಿಂದೂ ಭಯೋತ್ಪಾದನೆ ವಿಷಯದಲ್ಲಿ ಅವರನ್ನು ತರಾಟೆಗೆ ತೆಗೆದುಕೊಳ್ಳಲಿದೆ” ಎಂದಿದೆ.
ಕಾಂಗ್ರೆಸ್ ಪಕ್ಷ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದ ಅವರು, ತಾಯಿ ಭಾರತಿಯ ರಕ್ಷಣೆಗೆ ಬಿಜೆಪಿಯ ಮೊದಲ ಆದ್ಯತೆ ಎಂದಿದ್ದಾರೆ.
ದೇಶಕ್ಕೆ ಎರಡು ಪ್ರಧಾನಮಂತ್ರಿಗಳು ಬೇಕು ಎಂಬ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಅವರ ಹೇಳಿಕೆಗೆ ರಾಹುಲ್ ಗಾಂಧಿ ಅವರ ಅಭಿಪ್ರಾಯ ಏನು ಎಂದು ಪ್ರಶ್ನಿಸಿದ ಅವರು, ಒಮರ್ ಹೇಳಿಕೆ ನೀಡಿ 12 ದಿನಗಳೇ ಕಳೆದಿವೆ ಆದರೂ ಯಾಕೆ ರಾಹುಲ್ ಪ್ರತಿಕ್ರಿಯೆ ನೀಡಿಲ್ಲ ಎಂದು ಪ್ರಶ್ನಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.