ನವದೆಹಲಿ: ಇದೇ ಮೊದಲ ಬಾರಿಗೆ, ರಾಷ್ಟ್ರೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ದೇಶದ ಅತೀ ಹಿರಿಯ ಕಾಂಗ್ರೆಸ್ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ದೇಶದ 545 ಲೋಕಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 437 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇಳಿಸಿದೆ. ತನ್ನ ಇತಿಹಾಸದಲ್ಲೇ ಅತೀ ಹೆಚ್ಚು ಸ್ಪರ್ಧಿಗಳನ್ನು ಈ ಬಾರಿ ಕಣಕ್ಕಿಳಿಸುತ್ತಿದೆ. ಕಾಂಗ್ರೆಸ್ 423 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.
ಬಿಜೆಪಿ ರಾಷ್ಟ್ರೀಯ ಮಟ್ಟದಲ್ಲಿ ಬೆಳವಣಿಗೆಯನ್ನು ಕಾಣುತ್ತಿದೆ ಎಂಬುದನ್ನು ಇದು ತೋರಿಸುತ್ತದೆ, ಅದರಲ್ಲೂ ಕಳೆದ ಕೆಲವು ವರ್ಷಗಳಿಂದ ಬಿಜೆಪಿ ಕ್ಷಿಪ್ರಗತಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದ್ದು, ದೇಶದ ಅತೀ ದೊಡ್ಡ ಪಕ್ಷ ಎನಿಸಿಕೊಂಡಿದೆ. ಇನ್ನೊಂದೆಡೆ, ಹಿರಿಯ ಕಾಂಗ್ರೆಸ್ ಪಕ್ಷ ತನ್ನ ವರ್ಚಸ್ಸನ್ನು ಕಳೆದುಕೊಳ್ಳುತ್ತಿದೆ.
ಹಲವಾರು ಪಕ್ಷಗಳೊಂದಿಗೆ ಮೈತ್ರಿಯನ್ನು ಮಾಡಿಕೊಂಡ ಪರಿಣಾಮವಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಸಂಖ್ಯೆ ಇಳಿಮುಖವಾಗಿದೆ. 2014ರಲ್ಲಿ ಇದು 464 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು, ಇದರಲ್ಲಿ 42 ಮಂದಿ ಮಾತ್ರ ಗೆದ್ದಿದ್ದರು.
2014ರಲ್ಲಿ ಬಿಜೆಪಿ 428 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು, ಇದರಲ್ಲಿ 282 ಸ್ಥಾನಗಳಲ್ಲಿ ಗೆದ್ದು ಬಹುಮತದೊಂದಿಗೆ ಸರ್ಕಾರವನ್ನು ನಡೆಸಿತ್ತು.
2009ರಲ್ಲಿ ಬಿಜೆಪಿ 433 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು ಮತ್ತು ಕಾಂಗ್ರೆಸ್ 440 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಬಿಜೆಪಿ ಗೆದ್ದಿದ್ದು 116 ಕ್ಷೇತ್ರಗಳಲ್ಲಿ, ಕಾಂಗ್ರೆಸ್ 206 ಕ್ಷೇತ್ರಗಳಲ್ಲಿ ಗೆದ್ದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.