ಮುಂಬಯಿ: ಮಹಿಳಾ ಮತದಾನ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಚುನಾವಣಾ ಆಯೋಗವು ವಿಭಿನ್ನ ಪ್ರಯತ್ನವನ್ನು ನಡೆಸಿದೆ. ಮುಂಬಯಿ ಉಪನಗರದಲ್ಲಿನ ‘ಸಖಿ ಮತದಾನ ಕೇಂದ್ರ’ಗಳಲ್ಲಿ ಮತದಾನ ಮಾಡಲು ಬರುವ ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ಹಂಚುವುದಾಗಿ ಘೋಷಣೆ ಮಾಡಿದೆ. ಎಪ್ರಿಲ್ 29 ರಂದು ಇಲ್ಲಿ ಮತದಾನ ನಡೆಯಲಿದೆ.
ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮತಗಟ್ಟೆಗೆ ಆಗಮಿಸಿ, ಮತದಾನವನ್ನು ಮಾಡಲಿ ಎಂಬ ಉದ್ದೇಶದಿಂದ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಚುನಾವಣಾ ಆಯೋಗ ಹೇಳಿದೆ.
‘ಸಖಿ ಮತದಾನ ಕೇಂದ್ರ’ಗಳನ್ನು ಸಂಪೂರ್ಣವಾಗಿ ಮಹಿಳೆಯರೇ ನಿರ್ವಹಣೆ ಮಾಡಲಿದ್ದಾರೆ, ಇಲ್ಲಿಗೆ ಮತದಾನ ಮಾಡಲು ಬರುವ ಪ್ರತಿ ಮಹಿಳೆಯರಿಗೂ ಸ್ಯಾನಿಟರಿ ಪ್ಯಾಡ್ ಪ್ಯಾಕ್ ನೀಡುವುದಾಗಿ ಘೋಷಣೆ ಮಾಡಲಾಗುತ್ತದೆ. ಮಾತ್ರವಲ್ಲ, ಮತದಾನ ಮಾಡಲು ಬರುವ ಎಲ್ಲರಿಗೂ ಕೂಲ್ ಡ್ರಿಂಕ್ಸ್ ವ್ಯವಸ್ಥೆಯನ್ನೂ ಮಾಡಲಾಗಿದೆ. ರಂಗೋಲಿ, ಕಲಾ ಚಿತ್ರಗಳು ಈ ಮತಗಟ್ಟೆಗಳನ್ನು ಇನ್ನಷ್ಟು ಕಂಗೊಳಿಸುವಂತೆ ಮಾಡಲಿದೆ.
ಸ್ವಸಹಾಯ ಗುಂಪುಗಳ ಸದಸ್ಯರು ಮತ್ತು ಅಂಗನವಾಡಿ ಕಾರ್ಯಕರ್ತರು ಮಹಿಳಾ ಮತದಾನ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನವನ್ನು ಮಾಡುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.