ನವದೆಹಲಿ: ಭಾರತ ಮತ್ತು ಚೀನಾ ಎರಡನೇ ಅನೌಪಚಾರಿಕ ಶೃಂಗಸಭೆಗೆ ಸಜ್ಜಾಗಿವೆ. ಮೂಲಗಳ ಪ್ರಕಾರ ಮುಂದಿನ ಅಕ್ಟೋಬರ್ ತಿಂಗಳಲ್ಲಿ ಸಭೆ ನಿಗದಿಯಾಗಿದೆ. ಮೊದಲ ಅನೌಪಚಾರಿಕ ಶೃಂಗಸಭೆಯು 2018ರ ಎಪ್ರಿಲ್ ತಿಂಗಳಲ್ಲಿ ಚೀನಾದ ವುಹಾನ್ನಲ್ಲಿ ಜರುಗಿತ್ತು. ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಇದರಲ್ಲಿ ಭಾಗಿಯಾಗಿದ್ದರು.
ಲೋಕಸಭಾ ಚುನಾವಣೆಯ ಫಲಿತಾಂಶ ಬರುವುದಕ್ಕೆ ಒಂದು ತಿಂಗಳು ಮುಂಚಿತವಾಗಿಯೇ ಭಾರತ ಮತ್ತು ಚೀನಾ ಈ ಅನೌಪಚಾರಿಕ ಸಭೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ. ನವೆಂಬರ್ ತಿಂಗಳಲ್ಲಿ ಮೊದಲು ಸಮಯ ನಿಗದಿಯಾಗಿತ್ತು, ಬಳಿಕ ಇದನ್ನು ಅಕ್ಟೋಬರ್ ತಿಂಗಳಿಗೆ ಬದಲಾಯಿಸಲಾಗಿದೆ ಎಂದು ಮೂಲಗಳು ತಿಳಿಸಿವೆ, ಅರುಣಾಚಲ ಪ್ರದೇಶದ ವಿವಾದಿತ ಗಡಿ, ಚೀನಾದ ಒನ್ ಬೆಲ್ಟ್ ಒನ್ ರೋಡ್ ಯೋಜನೆ, ಪಾಕ್ ಭಯೋತ್ಪಾದಕರ ಬಗ್ಗೆ ಚೀನಾ ನಿಲುವು ಈ ಬಾರಿಯ ಸಭೆಯ ಪ್ರಮುಖ ಅಜೆಂಡಾ ಆಗಿರಲಿದೆ ಎಂದು ಮೂಲಗಳು ತಿಳಿಸಿವೆ.
ದೋಕ್ಲಾಂ ಬಿಕ್ಕಟ್ಟು ಉದ್ಭವಿಸಿದ ಬಳಿಕ ಉಭಯ ದೇಶಗಳು ವುಹಾನ್ನಲ್ಲಿ ಸಭೆಯನ್ನು ಆಯೋಜನೆಗೊಳಿಸಿದ್ದವು. ಈ ಸಭೆಯು ಉಭಯ ದೇಶಗಳ ನಡುವಣ ಸಂಬಂಧವನ್ನು ಉತ್ತಮಗೊಳಿಸುವಲ್ಲಿ ಸಾಕಷ್ಟು ಸಹಕಾರಿಯಾಯಿತು. ಉಭಯ ದೇಶಗಳ ನಾಯಕರು ಕಾರ್ಯತಾಂತ್ರಿಕ ನಿರ್ದೇಶನಗಳನ್ನು ನೀಡಿದರು, ಇದರಿಂದ ಉನ್ನತ ಮಟ್ಟದಲ್ಲಿ ಸಂಬಂಧ ಉತ್ತಮಗೊಂಡಿತು, ಸೇನಾ ಪಡೆಗಳ ನಡುವಣ ಅರ್ಥೈಸುವಿಕೆಗೆ ದಾರಿ ಮಾಡಿಕೊಟ್ಟಿತು ಎಂದು ಹಿರಿಯ ಅಧಿಕಾರಿಗಳು ವಿಶ್ಲೇಷಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.