ವಾರಣಾಸಿ: ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ವಾರಣಾಸಿ ಲೋಕಸಭಾ ಕ್ಷೇತ್ರಕ್ಕೆ ನಾಮಪತ್ರವನ್ನು ಸಲ್ಲಿಕೆ ಮಾಡಿದರು. ಬಿಹಾರ ಸಿಎಂ ನಿತೀಶ್ ಕುಮಾರ್, ಶಿರೋಮಣಿ ಅಕಾಳಿ ದಳ ನಾಯಕ ಪ್ರಕಾಶ್ ಸಿಂಗ್ ಬಾದಲ್, ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ, ಎಐಎಡಿಎಂಕೆ ನಾಯಕ ಓ.ಪನ್ನೀರಸೆಲ್ವಂ ಸೇರಿದಂತೆ ಹಲವಾರು ಎನ್ಡಿಎ ಮೈತ್ರಿಕೂಟದ ನಾಯಕರು ಮತ್ತು ಬಿಜೆಪಿ ಮುಖಂಡರಾದ ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಸುಷ್ಮಾ ಸ್ವರಾಜ್ ಮುಂತಾದವರು ಈ ವೇಳೆ ಉಪಸ್ಥಿತರಿದ್ದರು.
ಜಿಲ್ಲಾ ಮ್ಯಾಜಿಸ್ಟ್ರೇಟ್ ಸುರೇಂದ್ರ ಕುಮಾರ್ ಅವರಿಗೆ ಮೋದಿ ನಾಮಪತ್ರವನ್ನು ಹಸ್ತಾಂತರ ಮಾಡಿದ್ದಾರೆ.
ಪ್ರಧಾನಿಯವರು ಎರಡನೆಯ ಬಾರಿಗೆ ವಾರಣಾಸಿಯಿಂದ ಕಣಕ್ಕಿಳಿಯುತ್ತಿದ್ದಾರೆ. 2014ರಲ್ಲೂ ಇಲ್ಲಿಂದ ಸ್ಪರ್ಧಿಸಿ ಅವರು ಅತ್ಯಧಿಕ ಮತಗಳ ಅಂತರದಿಂದ ಜಯ ಗಳಿಸಿದ್ದರು. ಎರಡನೇ ಬಾರಿಯೂ ಅವರು ಅಭುತಪೂರ್ವವಾಗಿ ಜಯಗಳಿಸುವ ನಿರೀಕ್ಷೆ ಇದೆ. ಕಳೆದ ಬಾರಿಯೂ ಮೋದಿಯ ಪ್ರತಿಸ್ಪರ್ಧಿಯಾಗಿ ಅಜಯ್ ರಾಯ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸಿತ್ತು, ಈ ಬಾರಿಯೂ ಅವರನ್ನೇ ಕಣಕ್ಕಿಳಿಸಿದೆ.
ಗುರುವಾರ ವಾರಣಾಸಿಗೆ ಆಗಮಿಸಿರುವ ಮೋದಿಯವರು, ಅಲ್ಲಿ ಭರ್ಜರಿ ರೋಡ್ ಶೋ ಅನ್ನು ನಡೆಸಿದ್ದಾರೆ. ಜನಸಾಗರವೇ ಅವರ ರೋಡ್ ಶೋನಲ್ಲಿ ಭಾಗಿಯಾಗಿತ್ತು.
ಮೇ 19 ರಂದು ವಾರಣಾಸಿಯಲ್ಲಿ ಚುನಾವಣೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.