ನವದೆಹಲಿ : ಜೈಶ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮತ್ತು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಮಸೂದ್ ಅಜರ್ನನ್ನು ಮೇ ಒಂದರಂದು ಜಾಗತಿಕ ಉಗ್ರ ಎಂದು ವಿಶ್ವಸಂಸ್ಥೆ ನಿರ್ಬಂಧ ಸಮಿತಿ ಘೋಷಣೆ ಮಾಡುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಚೀನಾ ತನ್ನ ನಿಲುವನ್ನು ಬದಲಾಯಿಸಿ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಗೆ ಅನುವು ಮಾಡಿಕೊಡುವ ನಿರೀಕ್ಷೆ ಇದೆ.
ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಣೆ ಮಾಡುವುದರಿಂದ ಆತನ ಸಂಘಟನೆಯ ಮೇಲೆ ಜಗತ್ತಿಗೆ ಆರ್ಥಿಕ ನಿರ್ಬಂಧವನ್ನು ವಿಧಿಸುವುದು ಸಾಧ್ಯವಾಗಲಿದೆ.
ಒಂದು ವೇಳೆ ಮಸೂದ್ ಅಜರ್ ಜಾಗತಿಕ ಉಗ್ರ ಎಂದು ಘೋಷಿಸಲ್ಪಟ್ಟರೆ ಅದು ನರೇಂದ್ರ ಮೋದಿ ಸರಕಾರಕ್ಕೆ ದೊರಕುವ ಅತಿ ದೊಡ್ಡ ರಾಜ್ಯ ತಾಂತ್ರಿಕ ಗೆಲುವಾಗಲಿದೆ. ಫೆಬ್ರವರಿ 14 ರಂದು ನಡೆದ ದಾಳಿಯ ಬಳಿಕ ಭಾರತವು ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ಸಾಕಷ್ಟು ಪ್ರಯತ್ನಗಳನ್ನು ನಡೆಸುತ್ತಾ ಬಂದಿದೆ.
ಅಮೆರಿಕ, ಫ್ರಾನ್ಸ್ ಮತ್ತು ಯುಕೆ ಮಸೂದ್ ಅಜರ್ನನ್ನು ಜಾಗತಿಕ ಉಗ್ರ ಎಂದು ಘೋಷಿಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸುತ್ತಾ ಬಂದಿದೆ. ಆದರೆ ಚೀನಾದ ವಿರೋಧದಿಂದಾಗಿ ಅವುಗಳ ಪ್ರಯತ್ನ ವಿಫಲವಾಗುತ್ತಿತ್ತು. ಇದೀಗ ಚೀನಾ ತನ್ನ ಬಿಗಿ ನಿಲುವನ್ನು ಸಡಿಲಗೊಳಿಸಿರುವ ಹಿನ್ನಲೆಯಲ್ಲಿ ಅವುಗಳ ಪ್ರಯತ್ನ ಸಾಕಾರಗೊಳ್ಳುವ ನಿರೀಕ್ಷೆ ಇದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.