ನವದೆಹಲಿ : ಭಾರತೀಯ ನಾಗರಿಕತ್ವಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ ಎಂದು ಮೂಲಗಳು ತಿಳಿಸಿವೆ.
ರಾಹುಲ್ ಗಾಂಧಿ ಅವರ ನಾಗರಿಕತ್ವಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಹ್ಮಣ್ಯ ಸ್ವಾಮಿ ಅವರ ದೂರಿನ ಅನ್ವಯ ನೋಟಿಸ್ ಜಾರಿಗೊಳಿಸಿರುವುದಾಗಿ ಸಚಿವಾಲಯದ ಮೂಲಗಳು ತಿಳಿಸಿವೆ.
Ministry of Home Affairs issues notice to Congress President Rahul Gandhi over his citizenship after receiving a complaint from Rajya Sabha MP Dr Subramanian Swamy; MHA asks Rahul Gandhi to respond in the matter within a ‘fortnight’. pic.twitter.com/rkFu6TJ7lu
— ANI (@ANI) April 30, 2019
ರಾಹುಲ್ ಗಾಂಧಿ ಅವರು ನಿರ್ದೇಶಕರು ಮತ್ತು ಕಾರ್ಯದರ್ಶಿಯೂ ಆಗಿರುವ ಬ್ಯಾಕಾಪ್ಸ್ ಲಿಮಿಟೆಡ್ ಕಂಪನಿಯು 2003ರಲ್ಲಿ ಯುನೈಟೆಡ್ ಕಿಂಗ್ಡಮ್ನಲ್ಲಿ ನೋಂದಣಿಯಾಗಿದೆ. ಈ ಕಂಪನಿಯು ಕಂಪನಿಯ 2005 ಮತ್ತು 2006ರಲ್ಲಿ ಕಂಪನಿಯ ವಾರ್ಷಿಕ ಪಾವತಿ ಸಲ್ಲಿಕೆಯಲ್ಲಿ ರಾಹುಲ್ ಜನನ ದಿನಾಂಕವನ್ನು 19/6/1979 ಎಂದು ಉಲ್ಲೇಖಿಸಲಾಗಿದೆ ಮತ್ತು ರಾಷ್ಟ್ರೀಯತೆಯನ್ನು ಬ್ರಿಟಿಷ್ ಎಂದು ಉಲ್ಲೇಖ ಮಾಡಲಾಗಿದೆ. 2009ರಲ್ಲಿ ಕಂಪನಿಯ ಡಿಸ್ಸೋಲುಷನ್ ಅಪ್ಲಿಕೇಶನಿನಲ್ಲೂ ಅವರ ರಾಷ್ಟ್ರೀಯತೆ ಬ್ರಿಟಿಷ್ ಎಂದು ಇದೆ ಎಂಬುದಾಗಿ ಗೃಹ ಸಚಿವಾಲಯ ಪತ್ರದಲ್ಲಿ ಉಲ್ಲೇಖ ಮಾಡಿದೆ.
ಇದಕ್ಕೆ ಸಂಬಂಧಿಸಿದಂತೆ ಎರಡು ವಾರಗಳೊಳಗೆ ಸ್ಪಷ್ಟನೆ ನೀಡುವಂತೆ ಗೃಹ ಸಚಿವಾಲಯವು ರಾಹುಲ್ ಗಾಂಧಿ ಅವರಿಗೆ ಸೂಚನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.