ಕಾಬುಲ್ : ಆಫ್ಘಾನಿಸ್ಥಾನದ ನಂಗಹಾರ್ ಪ್ರಾಂತ್ಯದಲ್ಲಿ ಮಂಗಳವಾರ 22 ಮಂದಿ ಇಸ್ಲಾಮಿಕ್ ಸ್ಟೇಟ್ ಉಗ್ರರನ್ನು ಹತ್ಯೆ ಮಾಡಲಾಗಿದೆ ಹಾಗೂ ಎರಡು ಮಂದಿಯನ್ನು ಬಂಧಿಸಲಾಗಿದೆ.
ಮಾಹಿತಿಗಳ ಪ್ರಕಾರ, ಮಂಗಳವಾರ ಬೆಳಗಿನ ಜಾವ ಭದ್ರತಾ ಪಡೆಗಳು ಖೋಗಿಯಾನಿ ಜಿಲ್ಲೆಯಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಿ, ಇಸಿಸ್ ಉಗ್ರರನ್ನು ದಮನ ಮಾಡುವ ಕಾರ್ಯ ಮಾಡಿದೆ. ಕಾರ್ಯಾಚರಣೆಯ ವೇಳೆ ಉಗ್ರರ 4 ಅಡಗುತಾಣಗಳನ್ನು ಧ್ವಂಸ ಮಾಡಲಾಗಿದೆ ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ನಾಶ ಪಡಿಸಲಾಗಿದೆ. ಕಾರ್ಯಾಚರಣೆಯ ವೇಳೆ ಯಾವುದೇ ಭದ್ರತಾ ಸಿಬ್ಬಂದಿಗಳಿಗೆ ಗಾಯಗಳಾಗಿಲ್ಲ ಎಂಬುದನ್ನು ಮೂಲಗಳು ಸ್ಪಷ್ಟಪಡಿಸಿವೆ.
ಅತ್ಯಂತ ಅಪಾಯಕಾರಿ ಮೂಲಭೂತವಾದಿ ಇಸ್ಲಾಮಿಕ್ ಉಗ್ರ ಸಂಘಟನೆಯಾಗಿರುವ ಇಸಿಸ್ ಕಳೆದ ಹಲವು ವರ್ಷಗಳಿಂದ ಆಫ್ಘಾನಿಸ್ಥಾನದಲ್ಲಿ ನೆಲೆ ಕಂಡುಕೊಳ್ಳುವ ಪ್ರಯತ್ನವನ್ನು ನಡೆಸುತ್ತಾ ಬರುತ್ತಿದೆ. ಆದರೆ ಅಲ್ಲಿನ ಸರಕಾರದ ಬದ್ಧತೆಯಿಂದಾಗಿ ಅದು ತನ್ನ ಕಾರ್ಯದಲ್ಲಿ ಅಷ್ಟೊಂದು ಸಫಲತೆಯನ್ನು ಕಾಣುತ್ತಿಲ್ಲ, ಈಗಾಗಲೇ ಈ ಸಂಘಟನೆ ಹಲವಾರು ಭಯೋತ್ಪಾದನಾ ಕೃತ್ಯಗಳನ್ನು ವಿಶ್ವದಾದ್ಯಂತ ನಡೆಸಿದೆ. ಇತ್ತೀಚಿಗೆ ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯ ಹೊಣೆಯನ್ನೂ ಈ ಸಂಘಟನೆ ಹೊತ್ತುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.