ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ಜಾರಿಗೊಳಿಸಿದೆ. 48 ಗಂಟೆಗಳೊಳಗೆ ನೋಟಿಸ್ಗೆ ಉತ್ತರ ನೀಡುವಂತೆ ಅವರಿಗೆ ಸೂಚನೆಯನ್ನು ನೀಡಲಾಗಿದೆ.
ಎಪ್ರಿಲ್ 23ರಂದು ಮಧ್ಯಪ್ರದೇಶದ ಶಹ್ಡೊಲ್ನಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿಯವರು ಬುಡಕಟ್ಟು ಜನರನ್ನು ಗುಂಡಿಕ್ಕಿ ಹತ್ಯೆ ಮಾಡಲು, ಅವರ ಮೇಲೆ ಆಕ್ರಮಣ ಮಾಡಲು ಅನುವು ಮಾಡಿಕೊಡುವಂತಹ ಹೊಸ ಕಾನೂನನ್ನು ತಂದಿದ್ದಾರೆ. ಈ ಕಾನೂನು ಆದಿವಾಸಿಗಳ ಭೂಮಿಯನ್ನು ,ಅರಣ್ಯವನ್ನು, ನೀರನ್ನು ಕಸಿಯುವಂತಹ ಕಾನೂನಾಗಿದೆ ಎಂದಿದ್ದರು.
ರಾಹುಲ್ ಗಾಂಧಿಯವರ ಈ ಹೇಳಿಕೆಯ ವಿರುದ್ಧ ಬಿಜೆಪಿ ಕಾರ್ಯಕರ್ತರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದರು. ಚುನಾವಣಾ ಆಯೋಗವು ಇದೀಗ ಈ ಪ್ರತಿಕ್ರಿಯೆಯ ಬಗ್ಗೆ 48 ಗಂಟೆಗಳೊಳಗೆ ಉತ್ತರವನ್ನು ನೀಡುವಂತೆ ರಾಹುಲ್ ಗಾಂಧಿಯವರಿಗೆ ನೋಟಿಸ್ ಜಾರಿಗೊಳಿಸಿದೆ.
ರಫೆಲ್ ಒಪ್ಪಂದದ ಬಗೆಗಿನ ಸುಪ್ರೀಂಕೋರ್ಟ್ ತೀರ್ಪನ್ನು ತಿರುಚಿ ಛೀಮಾರಿ ಹಾಕಿಕೊಂಡಿದ್ದ ರಾಹುಲ್ ಗಾಂಧಿ ಅವರು, ಇದೀಗ ಮತ್ತೆ ಅದೇ ರೀತಿಯ ಸುಳ್ಳಿನ ಕಾರಣದಿಂದ ಚುನಾವಣಾ ಆಯೋಗದ ಛೀಮಾರಿಗೆ ಒಳಗಾಗುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.