ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಕಮಾಂಡರ್ಗಳಾದ ತಾರಿಖ್ ಮೌಲ್ವಿ ಅಲಿಯಾಸ್ ಮುಫ್ತಿ ವಾಕಸ್ ಮತ್ತು ಲತೀಫ್ ಟೈಗರ್ ಹತರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಧಿಕೃತ ಮೂಲಗಳು ಈ ಮಾಹಿತಿಯನ್ನು ಇನ್ನಷ್ಟೇ ಖಚಿತಪಡಿಸಬೇಕಿದೆ. ಘಟನೆಯಲ್ಲಿ ಒರ್ವ ಯೋಧನಿಗೂ ಗಾಯವಾಗಿದೆ. ಪ್ರದೇಶದಲ್ಲಿ ಇನ್ನೂ ಇಬ್ಬರು ಉಗ್ರರು ಅವಿತುಕೊಂಡಿದ್ದಾರೆ.
ಟೈಗರ್, ಬುರ್ಹಾನ್ ವಾನಿ ತಂಡದಲ್ಲಿ ಬದುಕುಳಿದಿದ್ದ ಕೊನೆಯ ಉಗ್ರ ಎಂದು ಹೇಳಲಾಗಿದೆ.
ಶುಕ್ರವಾರ ಬೆಳಿಗ್ಗೆ ಶೋಪಿಯಾನ ಜಿಲ್ಲೆಯ ಇಮಾಮ್ ಸಾಹೇಬ್ ಪ್ರದೇಶದ ಅದ್ಕರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತ್ತು. ಈಗಲೂ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ಹೇಳಲಾಗುತ್ತಿದೆ.
ಉಗ್ರರು ಅವಿತುಕೊಂಡಿರುವ ಬಗ್ಗೆ ಖಚಿತ ಮಾಹಿತಿಯನ್ನು ಆಧರಿಸಿ, 34 ಆರ್ ಆರ್, ಸ್ಪೆಷಲ್ ಆಪರೇಶನ್ ಗ್ರೂಪ್ ಜಂಟಿಯಾಗಿ ಕಾರ್ಯಾಚರಣೆಯನ್ನು ನಡೆಸುತ್ತಿವೆ.
2016ರ ಜುಲೈನಲ್ಲಿ ಉಗ್ರ ಬುರ್ಹಾನ್ ವಾನಿಯ ಹತ್ಯೆಯಾದ ಬಳಿಕದಿಂದ ಶೋಪಿಯಾನದಲ್ಲಿ ಹಿಂಸಾಚಾರಗಳು ಭುಗಿಲೇಳುತ್ತಿವೆ. ಶೋಪಿಯಾನ ಅನಂತ್ ನಾಗ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ. ಮೇ.6ರಂದು ಇಲ್ಲಿ ಚುನಾವಣೆ ನಡೆಯಲಿದೆ.
ಕಳೆದ ವಾರ ಇಲ್ಲಿ ಭದ್ರತಾ ಪಡೆಗಳು ಇಬ್ಬರು ಉಗ್ರರಾದ ಸಫೇದಾರ್ ಅಮೀನ್ ಭಟ್ ಮತ್ತು ಬುರ್ಹಾನ್ ಅಹ್ಮದ್ ಘನಿಯನ್ನು ಹತ್ಯೆ ಮಾಡಿದ್ದವು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.