ನವದೆಹಲಿ: ಉತ್ತರಪ್ರದೇಶದ ಅಮೇಥಿ ಮತ್ತು ರಾಯ್ಬರೇಲಿಯಲ್ಲಿ ಸಹೋದರ ಮತ್ತು ತಾಯಿಯ ಪರವಾಗಿ ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿರುವ ಪ್ರಿಯಾಂಕ ವಾದ್ರಾ, ಈಗ ಪೇಟಾ(People for the Ethical Treatment of Animals )ದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಪ್ರಚಾರದ ವೇಳೆ ಹಾವಾಡಿಗರೊಂದಿಗೆ ಸೇರಿ ಹಾವನ್ನು ಆಡಿಸಿದ್ದೇ ಇದಕ್ಕೆ ಕಾರಣ.
ಹಾವು ಆಡಿಸುತ್ತಿದ್ದವರ ಪಕ್ಕದಲ್ಲಿ ಕುಳಿತು ಎಂಜಾಯ್ ಮಾಡುತ್ತಿದ್ದ ಪ್ರಿಯಾಂಕ ವಾದ್ರಾ ಅವರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೀಡಿಯೋದ ಕೊನೆಯಲ್ಲಿ ಇವರು ಹಾವಿನ ಬಾಲವನ್ನು ಹಿಡಿದು ಅಲ್ಲಾಡಿಸುತ್ತಿರುವುದು ರೆಕಾರ್ಡ್ ಆಗಿದೆ. ಹಾವಾಡಿಗರೊಂದಿಗೆ ಸಂವಾದವನ್ನು ನಡೆಸಿದ್ದರು. ಕೆಲವರು ವಾದ್ರಾ ಅವರ ಧೈರ್ಯವನ್ನು ಮೆಚ್ಚಿದರೆ, ಇನ್ನು ಕೆಲವರು ಅವರ ವರ್ತನೆಯನ್ನು ಟೀಕಿಸಿದ್ದಾರೆ.
ಪ್ರಿಯಾಂಕ ನಡೆ ಪ್ರಾಣಿಗಳ ಸಂರಕ್ಷಣೆಗಾಗಿರುವ ಪೇಟಾದ ಕೆಂಗಣ್ಣಿಗೆ ಗುರಿಯಾಗಿದ್ದು, ಅವರು ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದೆ. ಪ್ರಾಣಿಗಳ ಬಳಕೆಯನ್ನು ಪ್ರಚಾರದ ವೇಳೆ ಮಾಡಬಾರದು ಎಂಬ ಚುನಾವಣಾ ಆಯೋಗದ ನಿಯಮವನ್ನೂ ಅವರು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿದೆ.
ಒಟ್ಟಿನಲ್ಲಿ ಹಾವನ್ನು ಆಡಿಸಿ ಮತದಾರರನ್ನು ಸೆಳೆಯಲು ಮುಂದಾದ ಪ್ರಿಯಾಂಕ ಈಗ ತಾವಾಗಿಯೇ ಸಮಸ್ಯೆಯಲ್ಲಿ ಸಿಲುಕಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.