ನವದೆಹಲಿ: ನಟ ವಿವೇಕ್ ಒಬೇರಾಯ್ ನಟನೆಯ, ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧಾರಿತ ಸಿನಿಮಾ ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಮೇ.24ರಂದು ಬಿಡುಗಡೆಗೊಳ್ಳಲು ಸಜ್ಜಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಮರುದಿನ ಈ ಸಿನಿಮಾ ವೀಕ್ಷಿಸುವ ಅವಕಾಶ ಮೋದಿ ಅಭಿಮಾನಿಗಳಿಗೆ ಸಿಗಲಿದೆ.
ಎಪ್ರಿಲ್ 11ರಂದು ಈ ಸಿನಿಮಾ ಬಿಡುಗಡೆಗೆ ನಿಗದಿಯಾಗಿತ್ತು, ಆದರೆ ಚುನಾವಣಾ ಪ್ರಚಾರಕ್ಕೆ ಈ ಸಿನಿಮಾ ಅಡ್ಡಿಯಾಗುತ್ತದೆ ಎಂದು ಚುನಾವಣಾ ಆಯೋಗ ಸಿನಿಮಾದ ಬಿಡುಗಡೆಯನ್ನು ರದ್ದುಗೊಳಿಸಿತ್ತು. ಇದೀಗ ಫಲಿತಾಂಶ ಬಂದ ಮರುದಿನ ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿನಿಮಾ ನಿರ್ಮಾಪಕ ಸಂದೀಪ್ ಸಿಂಗ್ ಅವರು, ”ಹಲವಾರು ಚರ್ಚೆಗಳ ಬಳಿಕ, ಜನರ ಕುತೂಹಲ ಮತ್ತು ನಿರೀಕ್ಷೆಯನ್ನು ಗಮನದಲ್ಲಿಟ್ಟುಕೊಂಡು ಫಲಿತಾಂಶ ಬಂದ ಮರುದಿನವೇ ಸಿನಿಮಾವನ್ನು ಬಿಡುಗಡೆಗೊಳಿಸಲು ನಿರ್ಧರಿಸಿದ್ದೇವೆ” ಎಂದಿದ್ದಾರೆ.
ಒಮಂಗ್ ಕುಮಾರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ವಿವೇಕ್ ಒಬೇರಾಯ್, ಝರೀನಾ ವಾಹಬ್, ಬರ್ಖಾ ಬಿಷ್ಟ್ ಸೇನಾಗುಪ್ತ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರಧಾನಿ ಮೋದಿಯ ಬಾಲ್ಯದಿಂದ ಹಿಡಿದು ಅವರು ಪ್ರಧಾನಿಯಾಗಿ ಆಡಳಿತ ನಡೆಸುವವರಿಗಿನ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.