ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಸ್ಪರ್ಧಿಸಿರುವ ರಾಧಕೃಷ್ಣನ್ ನಗರದ ಉಪಚುನಾವಣೆ ಶನಿವಾರ ನಡೆಯುತ್ತಿದೆ. ಬಿಗಿ ಭದ್ರತೆಯ ನಡುವೆ ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ.
ಜಯಲಲಿತಾ ಅವರ ವಿರುದ್ಧ ಪ್ರಬಲ ಪ್ರತಿಸ್ಪರ್ಧಿಯಾಗಿ ಸಿಪಿಐನ ಸಿ.ಮಹೇಂದ್ರನ್ ಅವರು ಕಣದಲ್ಲಿದ್ದಾರೆ. ಅಲ್ಲದೇ ಸ್ವತಂತ್ರ ಮತ್ತು ಸಣ್ಣ ಪಕ್ಷಗಳ ಇತರ 26ಅಭ್ಯರ್ಥಿಗಳೂ ಚುನಾವಣಾ ಕಣದಲ್ಲಿದ್ದಾರೆ.
ಪ್ರಮುಖ ಪ್ರತಿಪಕ್ಷ ಡಿಎಂಕೆ ಚುನಾವಣೆಯನ್ನು ಬಹಿಷ್ಕರಿಸಿದೆ.
250,೦೦೦ ಮಂದಿ ಮತದಾನ ಮಾಡಲಿದ್ದಾರೆ, 5 ಗಂಟೆಗೆ ಮತದಾನ ಮುಕ್ತಾಯವಾಗಲಿದೆ.
ಮತದಾನದ ಹಿನ್ನಲೆಯಲ್ಲಿ ಈ ಕ್ಷೇತ್ರದಲ್ಲಿನ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.