ದಂತೇವಾಡ : ಛತ್ತೀಸ್ಗಢದ ದಂತೇವಾಡದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಇಬ್ಬರು ನಕ್ಸಲರು ಹತರಾಗಿದ್ದಾರೆ.
ಜಿಲ್ಲಾ ಮೀಸಲು ಪಡೆ ಮತ್ತು ಸ್ಪೆಷಲ್ ಟಾಸ್ಕ್ ಪೋರ್ಸ್ ಬುಧವಾರ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರನ್ನು ಬೇಟೆಯಾಡಲಾಗಿದೆ.
ದಂತೇವಾಡ ಮತ್ತು ಸುಕ್ಮಾ ಗಡಿಯ ಗೊಂಡೆರಸ್ ಅರಣ್ಯ ಪ್ರದೇಶದ ಸಮೀಪ ಬೆಳಗ್ಗೆ ಐದು ಗಂಟೆಗೆ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಏರ್ಪಟ್ಟಿತ್ತು. ಎನ್ಕೌಂಟರ್ ನಡೆದ ಸಂದರ್ಭ ನಕ್ಸಲ್ ಕಮಾಂಡರ್ಗಳಾದ ಶ್ಯಾಮ್, ದೇವ ಮತ್ತು ವಿನೋದ್ ಅರಣ್ಯದೊಳಗೆ ನಿರ್ಮಿಸಲಾದ ಟೆಂಟ್ ನಲ್ಲಿ ಇದ್ದರು ಎಂದು ಹೇಳಲಾಗಿದೆ.
ಎನ್ಕೌಂಟರ್ನಲ್ಲಿ ಇತರ ಹಲವಾರು ಮಂದಿ ನಕ್ಸಲರಿಗೆ ಗಾಯಗಳಾಗಿರುವ ಸಾಧ್ಯತೆ ಇದೆ. ಘಟನೆ ನಡೆದ ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು, ಸ್ಪೋಟಕಗಳನ್ನು ಮತ್ತು ಇತರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರದೇಶದಲ್ಲಿ ಈಗಲೂ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ಹೇಳಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.