ನವದೆಹಲಿ : ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರನ್ನು ಭ್ರಷ್ಟಾಚಾರಿ ನಂ. 1 ಎಂಬ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಸಮರ್ಥಿಸಿಕೊಂಡಿದ್ದಾರೆ. ಸತ್ಯವನ್ನೇ ಹೇಳಿದ್ದೇನೆ ಎಂದು ಅವರು ಪ್ರತಿಪಾದಿಸಿದ್ದಾರೆ.
ನವಭಾರತ್ ಟೈಮ್ಸ್ಗೆ ಸಂದರ್ಶನವನ್ನು ನೀಡಿ ಮಾತನಾಡಿದ ಅವರು, “ನಾನು ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಯಾಕೆ ಕುಪಿತಗೊಂಡಿದೆ ಎಂದು ನನಗೆ ತಿಳಿಯುತ್ತಿಲ್ಲ. ಹಾಲಿ ಪ್ರಧಾನಿಯ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಅವಹೇಳನಕಾರಿಯಾಗಿ ಮಾತನಾಡಿದಾಗ, ಪ್ರಧಾನಿಯ ಕುಟುಂಬದ ಬಡತನದ ಬಗ್ಗೆ ಮಾತನಾಡಿದಾಗ ಕಾಂಗ್ರೆಸ್ ಅದಕ್ಕೆ ಚಪ್ಪಾಳೆ ತಟ್ಟಿತ್ತು, ಆದರೆ ನಾನು ಅವರ ತಂದೆಯ ಬಗ್ಗೆ ಮಾತನಾಡಿದಾಗ ಕಾಂಗ್ರೆಸ್ ನಾಯಕರು ತಮ್ಮ ತಾಳ್ಮೆಯನ್ನು ಕಳೆದುಕೊಂಡಂತೆ ವರ್ತಿಸುತ್ತಿದ್ದಾರೆ” ಎಂದಿದ್ದಾರೆ.
“ಕಾಂಗ್ರೆಸ್ ವಲಯದ ಯಾರೊಬ್ಬರೂ ರಾಜೀವ್ ಗಾಂಧಿ ಭ್ರಷ್ಟಾಚಾರಿಯಲ್ಲ ಮತ್ತು ಪ್ರಧಾನಿ ಮೋದಿಯವರು ತಪ್ಪು ಹೇಳಿದ್ದಾರೆ ಎಂಬುದನ್ನು ಇದುವರೆಗೆ ಹೇಳಿಲ್ಲ” ಎಂದು ಮೋದಿ ಹೇಳಿದ್ದಾರೆ.
ಭಾಷಣಗಳಲ್ಲಿ ಪಾಕಿಸ್ಥಾನದ ಬಗ್ಗೆ ಉಲ್ಲೇಖ ಮಾಡುತ್ತಿರುವುದನ್ನು ಸಮರ್ಥಿಸಿಕೊಂಡಿರುವ ಮೋದಿ, ಇದು ಮಹಾನಗರ ಪಾಲಿಕೆಯ ಚುನಾವಣೆಯಲ್ಲ. ಇದು ರಾಷ್ಟ್ರೀಯ ಚುನಾವಣೆ ಮತ್ತು ಭಯೋತ್ಪಾದನೆ ಈ ದೇಶಕ್ಕೆ ಪ್ರಮುಖವಾದ ವಿಷಯವಾಗಿದೆ. ಹೀಗಾಗಿ ಭಯೋತ್ಪಾದನೆಯನ್ನು ರಫ್ತು ಮಾಡುತ್ತಿರುವ ಪಾಕಿಸ್ಥಾನದ ಬಗ್ಗೆ ಉಲ್ಲೇಖ ಮಾಡಿಯೇ ಮಾಡುತ್ತೇವೆ”ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.