ನವದೆಹಲಿ: ತಮ್ಮ ರಾಜಕೀಯ ವಿರೋಧಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಪದೇ ಪದೇ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ಪಕ್ಷವನ್ನು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅಳುವ ಮಗು ಎಂದು ವಿಡಂಬನೆ ಮಾಡಿದ್ದಾರೆ.
ಟ್ವೀಟ್ ಮಾಡಿರುವ ಜೇಟ್ಲಿ ಅವರು “ತಮ್ಮ ರಾಜಕೀಯ ವಿರೋಧಿಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸುವ ಧೋರಣೆಗಳು ಹೆಚ್ಚಾಗುತ್ತಿದೆ. ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಳುವ ಮಗುವಾಗಿ ಈ ಧೋರಣೆಯ ನೇತೃತ್ವವನ್ನು ವಹಿಸುತ್ತಿದೆ” ಎಂದಿದ್ದಾರೆ.
“ಚುನಾವಣೆ ನೀತಿ ಸಂಹಿತೆ ಜಾರಿ ಇರುವ ಸಂದರ್ಭದಲ್ಲಿ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ ಮೊಟಕುಗೊಳ್ಳುವುದಿಲ್ಲ. ಚುನಾವಣೆ ಭಾರತದ ಪ್ರಜಾಪ್ರಭುತ್ವದ ಅತಿದೊಡ್ಡ ಸಂಭ್ರಮ, ಈ ಸಂಭ್ರಮದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಸಂಪೂರ್ಣವಾಗಿ ರಕ್ಷಿಸಲ್ಪಟ್ಟಿರುತ್ತದೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಬಾರಿಯ ಮತದಾರರಿಗೆ ಅಧಿಕ ಪ್ರಮಾಣದಲ್ಲಿ ಬಂದು ಮತದಾನ ಮಾಡುವಂತೆ ಹೇಳಿದ ಸಂದರ್ಭದಲ್ಲಿ ಅವರು ಯಾವುದೇ ಪಕ್ಷದ ಬಗ್ಗೆ ಉಲ್ಲೇಖವನ್ನು ಮಾಡಿರಲಿಲ್ಲ ಎಂಬುದನ್ನು ಜೇಟ್ಲಿ ಸ್ಪಷ್ಟಪಡಿಸಿದ್ದಾರೆ.
ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಿತ್ತುಕೊಳ್ಳುವುದು ಗಾಂಧಿ ಪರಿವಾರದ ತತ್ವವಾಗಿದೆ, ಅವರು ಪ್ರಾಮಾಣಿಕ ಪ್ರಧಾನಿಯನ್ನೂ ಚೋರ್ ಎಂದು ಕರೆಯುತ್ತಾರೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷವು ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯ ಬಗ್ಗೆ ಚುನಾವಣಾ ಆಯೋಗಕ್ಕೆ ದೂರನ್ನು ನೀಡಿತ್ತು. ಆದರೆ ಚುನಾವಣಾ ಆಯೋಗ ಇಬ್ಬರಿಗೂ ಕ್ಲೀನ್ ಚಿಟ್ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.