ಬೆಂಗಳೂರು : ಸುವರ್ಣ ತ್ರಿಭುಜ ದೋಣಿ ಮೂಲಕ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ 7 ಮಂದಿ ಮೀನುಗಾರರ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 10 ಲಕ್ಷ ಪರಿಹಾರವನ್ನು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಅವರು ಹೇಳಿದ್ದಾರೆ. ಇತ್ತೀಚಿಗಷ್ಟೇ ಈ ದೋಣಿಯ ಅವಶೇಷಗಳು ಮಹಾರಾಷ್ಟ್ರದ ಸಮುದ್ರದಡಿ ಪತ್ತೆಯಾಗಿದ್ದವು.
ಕಣ್ಮರೆಯಾಗಿರುವ 7 ಮಂದಿ ಮೀನುಗಾರರಿಗೆ ಮೀನುಗಾರರ ವಿಪತ್ತು ಪರಿಹಾರ ನಿಧಿ ವತಿಯಿಂದ ರೂ.6 ಲಕ್ಷಗಳನ್ನು ಮತ್ತು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ರೂ. 4 ಲಕ್ಷಗಳನ್ನು ನೀಡುವುದಾಗಿ ಜಯಮಾಲಾ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, “ಒಂದು ವೇಳೆ ಕಣ್ಮರೆಯಾಗಿರುವ ಮೀನುಗಾರರು ಜೀವಂತವಾಗಿ ವಾಪಾಸ್ ಬಂದರೆ, ಈ ಪರಿಹಾರ ಮೊತ್ತವನ್ನು ಕುಟುಂಬಗಳು ಸರ್ಕಾರಕ್ಕೆ ವಾಪಾಸ್ ಮಾಡಬೇಕಾಗುತ್ತದೆ” ಎಂದಿದ್ದಾರೆ.
ಈ ಜನವರಿಯಲ್ಲಿ ರಾಜ್ಯ ಸರ್ಕಾರವು 7 ಮಂದಿಯ ಕುಟುಂಬಗಳಿಗೆ ರೂ.1 ಲಕ್ಷವನ್ನು ನೀಡಿತ್ತು. ಇದೀಗ ಹೆಚ್ಚುವರಿಯಾಗಿ ರೂ.10 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ.
ಮೀನುಗಾರಿಕಾ ವಿಪತ್ತು ಪರಿಹಾರ ನಿಧಿಯಿಂದ ಹಣವನ್ನು ಬಿಡುಗಡೆ ಮಾಡುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲಾಗಿದೆ. ಸಭೆಯ ಬಳಿಕ ಉತ್ತರಕನ್ನಡ ಮತ್ತು ಉಡುಪಿ ಜಿಲ್ಲೆಗಳ ಮೀನುಗಾರಿಕೆ ಇಲಾಖೆಗೆ ಉಪನಿರ್ದೇಶಕರಿಗೆ ಪರಿಹಾರ ಮೊತ್ತವನ್ನು ವಿತರಣೆ ಮಾಡುವ ಪ್ರಕ್ರಿಯೆಯನ್ನು ಆರಂಭಿಸುವಂತೆ ಮೀನುಗಾರಿಕೆ ಇಲಾಖೆಯ ಕಾರ್ಯದರ್ಶಿ ಸೂಚನೆಯನ್ನು ನೀಡಿದ್ದಾರೆ ಎಂದು ಜಯಮಾಲಾ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.