ಮಂಗಳೂರು: ಸ್ನೇಹ ಪ್ರೌಢಶಾಲೆಯಲ್ಲಿ ವಿವಿಧ ವಿದ್ಯಾರ್ಥಿ ಸಂಘಗಳ ಉದ್ಘಾಟನಾ ಕಾರ್ಯಕ್ರಮ ಜೂ.27ರಂದು ನಡೆಯಿತು. ಕಾರ್ಯಕ್ರಮವನ್ನು ಸ್ವರಸಿಂಚನ ಸುಳ್ಯದ ವ್ಯವಸ್ಥಾಪಕರಾದ ಶ್ರೀ ಕೃಷ್ಣರಾಜ್ ಕೇರ್ಪಳ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸುಗಮ ಸಂಗೀತದ ಬಗ್ಗೆ ಮಾಹಿತಿಯನ್ನು ನೀಡಿದರು.
ಶಾಲೆಯ ಹಿರಿಯ ವಿದ್ಯಾರ್ಥಿ ಅಕ್ಷರ ದಾಮ್ಲೆ ಕೆಲವು ಶಾಸ್ತ್ರೀಯ ಕೀರ್ತನೆಗಳನ್ನು ಹಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ| ಚಂದ್ರಶೇಖರ ದಾಮ್ಲೆ ವಹಿಸಿದ್ದರು. ವಿವಿಧ ಸಂಘಗಳ ಮಾರ್ಗದರ್ಶಿ ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಿಕ್ಷಕರಾದ ಪ್ರಸನ್ನ ಐವರ್ನಾಡು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಯಲಕ್ಷ್ಮಿ ವಂದಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.